ಬೆಂಗಳೂರು: ಅಟ್ಟಿಕಾ ಗೋಲ್ಡ್ (Attica Gold) ಕಂಪನಿಗೆ ಡಬಲ್ ಶಾಕ್ ಎದುರಾಗಿದೆ. ಜಾರಿ ನಿರ್ದೇಶನಾಲಯ (ED) ದಾಳಿ ಮುಕ್ತಾಯ ಬೆನ್ನಲ್ಲೇ ಆದಾಯ ತೆರಿಗೆ (IT) ಇಲಾಖೆ ದಾಳಿ ನಡೆಸಿದೆ.
ಅಟ್ಟಿಕಾ ಗೋಲ್ಡ್ನ 19 ಪ್ರದೇಶದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿಯಷ್ಟೇ ಇಡಿ ದಾಳಿ ಮುಕ್ತಾಯಗೊಳಿಸಿತ್ತು. ಅದರ ಬೆನ್ನಲ್ಲೇ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದರು.
ಚಿನ್ನದ ಅಕ್ರಮ ಸಾಗಣೆ ಮತ್ತು ಆರ್ಥಿಕ ವಂಚನೆಗೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ನಿನ್ನೆ ದಾಳಿ ಮಾಡಿದ್ದರು.

