ಮಂಡ್ಯ: ತಮಿಳುನಾಡಿಗೆ ನಿತ್ಯವೂ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಖಂಡಿಸಿ ಮಂಡ್ಯದಲ್ಲಿ (Mandya) ರೈತಪರ ಹಾಗೂ ಕನ್ನಡಪರ (Farmer Protest) ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಸಿಡ್ಲ್ಯೂಎಂಎ ಅವೈಜ್ಞಾನಿಕ ನಿರ್ಧಾರದಿಂದ ಕಂಗೆಟ್ಟಿರುವ ಪ್ರತಿಭಟನಾಕಾರರು, ಮಂಡ್ಯದ ಪ್ರಮುಖ ವೃತ್ತವಾದ ಸಂಜಯ ವೃತ್ತದಲ್ಲಿ ಜಮಾಯಿಸಿ ಸರ್ಕಾರದ ಹಾಗೂ ಪ್ರಾಧಿಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತಡೆದು ವಾಹನ ಸಂಚಾರವನ್ನು ಸ್ಥಗಿತಗೊಳಿಸಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ರಾಜ್ಯದಲ್ಲಿ ಈಗಾಗಲೇ ಮಳೆಯ ಕೊರತೆ ಹಾಗೂ ನೀರಿನ ಸಂಕಷ್ಟವಿದ್ದರೂ, ಪದೇ ಪದೇ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗುತ್ತಿದ್ದು, ಈ ಹೊಸ ಆದೇಶ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಿಡಿಕಾರಿದರು.ಇದನ್ನೂ ಓದಿ: ರಾಜ್ಯದಲ್ಲಿ ಭೀಕರ ಬರ, ಸರ್ಕಾರ ರೈತರ ಸಾಲಮನ್ನಾ ಮಾಡಬೇಕು: ಆರ್.ಅಶೋಕ್
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹನಿ ನೀರನ್ನೂ ಹರಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ಹೋರಾಟಗಾರರು, ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರವು ಈಗ ಮತ್ತೊಮ್ಮೆ ಮುಂದಿನ 15 ದಿನಗಳ ಕಾಲ ನಿತ್ಯ 4 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶಿಸಿರುವದನ್ನು ಖಂಡಿಸಿದರು.ಇದನ್ನೂ ಓದಿ: ಹಾಲಿನ ದರ ಏರಿಕೆ ವಿಚಾರ – ಕೆಎಂಎಫ್ಗೆ ಪ್ರಸ್ತಾವನೆ ಕೇಳಿದ ಸಿಎಂ

