ಲಕ್ನೋ: ದೆಹಲಿಯಿಂದ (Delhi) ಬಲಿಯಾಗೆ ತೆರಳುತ್ತಿದ್ದ ಕಾರೊಂದು (Car) ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್ ವೇಯಲ್ಲಿ (Lucknow-Agra Expressway) ಶನಿವಾರ ಬೆಳಗ್ಗೆ ನಡೆದಿದೆ.
ದೆಹಲಿ ನಿವಾಸಿಗಳಾದ ಐವರು ಪುರುಷರು ಕೆಲಸದ ನಿಮಿತ್ತ ಬಲಿಯಾಗೆ ತೆರಳುತ್ತಿದ್ದರು. ಬೆಳಗ್ಗೆ ಸುಮಾರು 7:30ರ ವೇಳೆಗೆ ದೌಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಇಮ್ರಾನ್ ಅಹ್ಮದ್ ತಿಳಿಸಿದ್ದಾರೆ. ಇದನ್ನೂ ಓದಿ: ಚಿನ್ನಾಭರಣ, ನಗದು ವಿಡಿಯೋ ಮಾಡಿ ಹರಿಬಿಟ್ಟ ರೀಲ್ಸ್ ರಾಣಿ ಮನೆಗೆ ಕನ್ನ!
ಮೃತರನ್ನು ಜೈಪ್ರಕಾಶ್ (32), ಭೂಪೇಂದ್ರ (35) ಮತ್ತು ಕಪಿಲ್ (31) ಎಂದು ಗುರುತಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಯಶವಂತ್ (33) ಹಾಗೂ ಅವರ ಪಕ್ಕದಲ್ಲಿ ಕುಳಿತಿದ್ದ ಚಂದ್ರಕಾಂತ್ (35) ಗಾಯಗೊಂಡಿದ್ದಾರೆ. ಕಾರಿನ ವೇಗ ಗಂಟೆಗೆ ಸುಮಾರು 140 ಕಿ.ಮೀ. ಇತ್ತು ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚಾ.ನಗರ | ರೈತನ ಕೊಂದಿದ್ದ ಹುಲಿ ಕೊನೆಗೂ ಸೆರೆ
ಅಪಘಾತದ ವೇಳೆ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮೂವರು ವ್ಯಕ್ತಿಗಳು ವಾಹನದಿಂದ ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಎಸಿಪಿ ತಿಳಿಸಿದ್ದಾರೆ. ಇನ್ನು ಗಾಯಗೊಂಡ ಯಶವಂತ್ ಮತ್ತು ಚಂದ್ರಕಾಂತ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇದನ್ನೂ ಓದಿ: ಚುನಾವಣಾ ಆಯೋಗ ಮತಗಳ್ಳತನದ ಪಾಲುದಾರ: ಡಿಕೆಶಿ
ಅಪಘಾತದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಮೃತರು ಹಾಗೂ ಗಾಯಗೊಂಡವರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಕರ್ನಾಟಕ ಪರ್ವದ ಆಶಯ: ಡಿಕೆಶಿ

