ಚಿಕ್ಕಬಳ್ಳಾಪುರ/ ಬೆಂಗಳೂರು: ಕೊಲ್ಕತ್ತಾದಿಂದ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದ ವ್ಯಕ್ತಿಯೊಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಬೃಂದಾವನ ಅಪಾರ್ಟ್‌ಮೆಂಟ್ ನಿವಾಸಿ ಗಣೇಶ್ ಸುಬ್ಬಣ್ಣ ಮೃತಪಟ್ಟವರು. ವಿಮಾನದಿಂದ ಇಳಿದು ಲಾಂಜ್ ಬಳಿ ಬರುತ್ತಿದ್ದ ವೇಳೆ ಅವರಿಗೆ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಏರ್‌ಪೋರ್ಟ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೃದಯಾಘಾತದಿಂದ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಜೂರಿಚ್‌ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಕುಡಿದು ಕುಳಿತಿದ್ದ ಪೈಲಟ್!
ಕಳೆದ ಎರಡು ತಿಂಗಳ ಅವಧಿಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ನಾಲ್ವರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್ ವೇಯಲ್ಲಿ ಕಾರು ಪಲ್ಟಿಯಾಗಿ ಮೂವರು ದುರ್ಮರಣ – ಇಬ್ಬರಿಗೆ ಗಾಯ

