ಚಿತ್ರದುರ್ಗ: ಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿಯಾಗಿ (TT Vehicle Overturned) 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಗೇಟ್ ಬಳಿ ನಡೆದಿದೆ.
ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾದ ಹಿನ್ನೆಲೆ ಟಿಟಿ ವಾಹನ ಪಲ್ಟಿಯಾಗಿದೆ.
ಘಟನೆಯಲ್ಲಿ ಟಿಟಿ ವಾಹನದಲ್ಲಿದ್ದ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನ ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

