– ಪಬ್ಲಿಕ್ ಟಿವಿ Exclusive ಸಂದರ್ಶನದಲ್ಲಿ ಡಿಕೆಶಿ ಸ್ಫೋಟಕ ಮಾಹಿತಿ
ಬೆಂಗಳೂರು: ಬಿಜೆಪಿಯವರು ನನ್ನನ್ನ ಸುಮ್ಮನೆ ಬಿಡಲ್ಲ, ನನ್ನನ್ನ ಟ್ರ್ಯಾಕ್ ಮಾಡ್ತಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಅಧಿಕಾರಿಗಳನ್ನ ಕಳಿಸಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ʻಪಬ್ಲಿಕ್ ಟಿವಿʼ ಮುಖ್ಯಸ್ಥರಾದ ಹೆಚ್.ಆರ್. ರಂಗನಾಥ್ ಅವರೊಂದಿಗೆ ನಡೆದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಐಟಿ-ಇಡಿ ದಾಳಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

ಬಿಜೆಪಿ ಅವರು ನನ್ನನ್ನ ಸುಮ್ಮನೆ ಬಿಡೋದಿಲ್ಲ. ನನ್ನನ್ನ ಟ್ರ್ಯಾಕ್ ಮಾಡ್ತಿದ್ದಾರೆ. ನನ್ನ ಸುತ್ತಮುತ್ತಲೇ ಇದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಅಧಿಕಾರಿಗಳನ್ನ ಕಳುಹಿಸಿದ್ದಾರೆ. ದೆಹಲಿಯಿಂದಲೇ ಕುಳಿತು ಆಪರೇಟ್ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ ಚುನಾವಣೆ ಹೊತ್ತಿಗೆ ಐದಾರು ಸಚಿವರ ಮೇಲೆ ಐಟಿ-ಇಡಿ ಮೂಲಕ ದಾಳಿಗೆ ಕಾಯ್ತಿದ್ದಾರೆ ಎಂದು ಸಿಎಂ ಡಿಕೆಶಿ ಹೇಳಿದರು.
ಇದೇ ವೇಳೆ ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿದರು. ಕೆಪಿಎಸ್‌ಸಿ ಪರೀಕ್ಷೆ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ಅವರ ಮೇಲೆ ಯಾವುದೇ ಆರೋಪ ಇಲ್ಲ. ಕೆಪಿಎಸ್‌ಸಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧನೇ ಇಲ್ಲ. ಪ್ರಿಯಾಂಕ್ ಬುದ್ಧಿವಂತರಾಗಿ ಇಡಿಗೆ ಪ್ರಕರಣ ಬಿಟ್ಟುಕೊಡದೇ ಆ ಅಧಿಕಾರಿಯನ್ನ ಎಳೆದು ತಂದ್ರು ಎಂದು ತಿಳಿಸಿದರು.
5 ರಿಂದ 6 ಜನರಿಗೆ ದಾಳಿ ಆತಂಕ ಇದೆ
ಐಟಿ-ಇಡಿ ದಾಳಿ ಬಗ್ಗೆ ಮಾತನಾಡಿರುವ ಡಿಕೆ ಶಿವಕುಮಾರ್, 5 ರಿಂದ 6 ಜನರ ಮೇಲೆ ದಾಳಿ ನಡೆಯುವ ಸಾಧ್ಯತೆಗಳಿವೆ ಎಂದು ತಿಳಿಸಿದರು.

