-ಬ್ಯಾಂಕ್ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇಲ್ಲ
ನವದೆಹಲಿ: ಇಂದಿನಿಂದ 3 ದಿನಗಳ ಕಾಲ ಕರೆ ನೀಡಿದ್ದ ಬ್ಯಾಂಕ್ ಮುಷ್ಕರವನ್ನು (Bank Strike) ಮುಂದೂಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಇಂಡಿಯಾ (State Bank Of India) ಮಹತ್ವದ ಪ್ರಕಟಣೆ ಹೊರಡಿಸಿದೆ.
ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿದ್ದ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಹೀಗಾಗಿಬ್ಯಾಂಕ್ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇಲ್ಲ. ಎಲ್ಲಾ ಶಾಖೆಗಳು ಮತ್ತು ಎಲ್ಲಾ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತವೆ. ಎಲ್ಲಾ SBI ಬ್ಯಾಂಕ್‌ಗಳು ಓಪನ್ ಇರುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಭಾನುವಾರ (ಸೆ.27) ರಾತ್ರಿ ಭಾರತೀಯ ಬ್ಯಾಂಕ್‌ಗಳ ಸಂಘ (IBA) ಮತ್ತು ಬ್ಯಾಂಕ್ ಯೂನಿಯನ್‌ಗಳ ಒಕ್ಕೂಟದ (UFBU) ನಡುವೆ ನಡೆದ ಸಭೆಯ ನಂತರ ಈ ಬೆಳವಣಿಗೆ ನಡೆದಿದೆ.
ಸಭೆಯಲ್ಲಿ ತಿಂಗಳ ಎಲ್ಲಾ ಶನಿವಾರಗಳನ್ನು ರಜಾದಿನಗಳಾಗಿ ಘೋಷಿಸುವ ಬಗ್ಗೆ ಚರ್ಚಿಸಲು ಉನ್ನತ ಮಟ್ಟದ ಸಮಿತಿ ತಕ್ಷಣವೇ ರಚಿಸಲಾಗುವುದು. ಈ ಸಮಿತಿಯು ಎಲ್ಲಾ ಮಾರ್ಗಗಳ ಬಗ್ಗೆ ಪರಿಶೀಲಿಸಿ, ನಂತರ ಈ ಬಗ್ಗೆ ಚರ್ಚಿಸಿ, ಮುಖ್ಯವಾಗಿ ಗ್ರಾಹಕರಿಗೆ ಒಪ್ಪಿಗೆಯಾಗುವಂತೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ.
— State Bank of India (@TheOfficialSBI) September 27, 2026

