ಬೆಂಗಳೂರು: ಕೆಂಗೇರಿ ಸಮೀಪದ ಆರ್.ಆರ್ ವೈದ್ಯಕೀಯ ಕಾಲೇಜು ಹಿಂಭಾಗದಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಂಚೆಪಾಳ್ಯ ಗ್ರಾಮದ ನಾಗರಾಜ್ ಮೃತ ದುರ್ದೈವಿ. ಇಂದು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ವಾಕಿಂಗ್‌ಗೆ ಹೋಗಿದ್ದ ವ್ಯಕ್ತಿ ಮೇಲೆ ಆನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಎರಡೂ ಕಾಂಪೌಂಡ್‌ಗಳೂ ಸಹ ಉರುಳಿಬಿದ್ದಿದ್ದು, ಸ್ಥಳೀಯರು ಕೂಡ ಆನೇ ದಾಳಿಯಿಂದಲೇ ಘಟನೆ ನಡೆದಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಸಿಸಿಟಿವಿಯಲ್ಲಿ ಆನೆ ಓಡಾಟ ಮಾಡಿರೋದು ಬೆಳಕಿಗೆ ಬಂದಿದೆ. ಬೆಳಗ್ಗೆ 5 ಗಂಟೆ 11 ನಿಮಿಷಕ್ಕೆ ಆನೆ ವೇಗವಾಗಿ ಓಡುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಇನ್ನು ಅದೇ ರಸ್ತೆಯಲ್ಲಿ ಜಾಗಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಲವೇ ಸೆಕೆಂಡ್‌ಗಳಲ್ಲಿ ಆನೆದಾಳಿಯಿಂದ ಬಚಾವಾಗಿದ್ದಾರೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

