ನವದೆಹಲಿ: ದೆಹಲಿ-ಎನ್‌ಸಿಆರ್‌ನಲ್ಲಿ ಅಪ್ರಾಪ್ತ ಬಾಲಕಿಯರು ಹಾಗೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ (Supreme Court), ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಗ್ರೇಟರ್ ನೋಯ್ಡಾದಿಂದ (Greater Noida) ದೆಹಲಿಗೆ ಸಂಚರಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ 16 ವರ್ಷದ ಬಾಲಕಿಯ ಮೇಲೆ ನಡೆದಿದ್ದ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣವೂ ನ್ಯಾಯಾಲಯದ ಗಮನಕ್ಕೆ ಬಂದಿದೆ.
ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ.ವಿನೋದ್ ಚಂದ್ರನ್ ಅವರ ಪೀಠವು ದೆಹಲಿ-ಎನ್‌ಸಿಆರ್‌ನಲ್ಲಿ ಇತ್ತೀಚೆಗೆ ವರದಿಯಾದ ಅತ್ಯಾಚಾರ ಪ್ರಕರಣಗಳ ಕುರಿತು ಕಳವಳ ವ್ಯಕ್ತಪಡಿಸಿದೆ. ಇಂತಹ ಘಟನೆಗಳು ಕಾನೂನು ಜಾರಿ ಹಾಗೂ ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿನ ವ್ಯವಸ್ಥಿತ ವೈಫಲ್ಯವನ್ನು ಎತ್ತಿ ತೋರಿಸುತ್ತವೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಮೋದಿ, ಚುನಾವಣಾ ಆಯುಕ್ತರ ಪ್ರತಿಕೃತಿ ದಹಿಸಲು ಯತ್ನ – ಮಂಡ್ಯದಲ್ಲಿ ʻಕೈʼ ಕಾರ್ಯಕರ್ತರ ಹೈಡ್ರಾಮಾ
2012ರ ನಿರ್ಭಯಾ ಪ್ರಕರಣಕ್ಕೂ ಪ್ರಸ್ತುತ ಘಟನೆಗಳಿಗೂ ನೋವಿನ ಸಾಮ್ಯತೆ ಕಂಡುಬರುತ್ತಿದೆ. ಘಟನೆಗಳ ಬಳಿಕ ಕೇವಲ ಸಂತಾಪ ಅಥವಾ ಕಳವಳ ವ್ಯಕ್ತಪಡಿಸುವುದು ಸಾಕಾಗುವುದಿಲ್ಲ. ಸಾರ್ವಜನಿಕರ ಸುರಕ್ಷತೆಗೆ ಹೊಣೆಗಾರರಾದವರ ಹೊಣೆಗಾರಿಕೆ ನಿಗದಿಪಡಿಸುವ ಅಗತ್ಯವಿದೆ ಎಂದು ನ್ಯಾಯಾಲಯ ಪೊಲೀಸರಿಗೆ ಹೇಳಿದೆ.
ಪಾರ್ಕ್ಗಳು, ರಸ್ತೆಗಳು, ಬಸ್‌ಗಳು, ಮೆಟ್ರೊ ನಿಲ್ದಾಣಗಳು ಹಾಗೂ ಇತರ ಸಾರ್ವಜನಿಕ ಸ್ಥಳಗಳು ಕಳಪೆ ಬೆಳಕು, ಸಮರ್ಪಕ ಗಸ್ತು ಮತ್ತು ನಿಗಾ ವ್ಯವಸ್ಥೆಯ ಕೊರತೆಯಿಂದಾಗಿ ಅಪಾಯದ ವಲಯಗಳಾಗಬಾರದು ಎಂದು ಪೀಠ ಹೇಳಿದೆ. ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸುವುದು, ಕಾನೂನು ಜಾರಿ ಹಾಗೂ ಆಡಳಿತ ವ್ಯವಸ್ಥೆಗಳ ಮೂಲ ಜವಾಬ್ದಾರಿ ಎಂದು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದೆ.ಇದನ್ನೂ ಓದಿ: ದರ್ಶನ್‌ಗೆ ಶಾಕ್ ಮೇಲೆ ಶಾಕ್ – ಪ್ರದೋಷ್ ಮಾಫಿ ಸಾಕ್ಷಿ ದಾಖಲು ಮುಂದೂಡಲು ಸಲ್ಲಿಸಿದ್ದ ಅರ್ಜಿ ವಜಾ
ದೆಹಲಿ-ಎನ್‌ಸಿಆರ್‌ನಲ್ಲಿ ಇತ್ತೀಚೆಗೆ ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆಯರ ವಿರುದ್ಧ ನಡೆದ ಹಲವು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಒಟ್ಟಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಸಾರ್ವಜನಿಕ ಸುರಕ್ಷತೆ, ಪೊಲೀಸ್ ಗಸ್ತು, ನಿಗಾ ವ್ಯವಸ್ಥೆ ಮತ್ತು ಆಡಳಿತಾತ್ಮಕ ಜವಾಬ್ದಾರಿಗಳ ಕುರಿತು ಪರಿಶೀಲನೆ ನಡೆಸಲಿದೆ.
16 ವರ್ಷದ ಬಾಲಕಿ ಗ್ರೇಟರ್ ನೋಯ್ಡಾದಿಂದ ಸ್ಲೀಪರ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕ ಮತ್ತು ಕಂಡಕ್ಟರ್‌ನಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾದಳು ಎನ್ನಲಾಗಿದೆ. ಬಳಿಕ ಆಕೆಯನ್ನು ಓಲ್ಡ್ ದೆಹಲಿಯ ಕಾಶ್ಮೀರಿ ಗೇಟ್ ಬಳಿ ಬಿಟ್ಟುಹೋಗಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.ಇದನ್ನೂ ಓದಿ: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ – 8 ಸೆಕೆಂಡಲ್ಲಿ ಕುಸಿದ ಪರ್ವತ; ವಿವಿಧೆಡೆ 21 ಮಂದಿ ಸಾವು

