ಧಾರವಾಡ: ಧಾರವಾಡದ (Dharwad) ಐನಾಕ್ಸ್ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹನುಮಂತ ಅಣ್ಣಿಗೇರಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿ, ಐನಾಕ್ಸ್ ಸಮೀಪದ ಖಾಲಿ ಜಾಗದಲ್ಲಿ ಮೃತದೇಹವನ್ನು ಎಸೆದು ಆರೋಪಿಗಳು ಪರಾರಿಯಾಗಿದ್ದರು.
ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಹನುಮಂತ ಹಾಗೂ ಯಲ್ಲಪ್ಪ ಬಂಡಿವಡ್ಡರ ನಡುವೆ ಜಗಳ ನಡೆದಿತ್ತು. ಈ ವೇಳೆ ಯಲ್ಲಪ್ಪ ಹನುಮಂತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಮೃತದೇಹವನ್ನು ಐನಾಕ್ಸ್ ಬಳಿ ಖಾಲಿ ಜಾಗದಲ್ಲಿ ಎಸೆದು ಪರಾರಿಯಾಗಿದ್ದ.
ಘಟನೆ ಬಳಿಕ ಯಲ್ಲಪ್ಪನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಕೊಲೆ ನಡೆದು ಒಂದು ತಿಂಗಳು ಕಳೆದರೂ ಆರೋಪಿಗಳ ಪತ್ತೆಯಾಗಿರಲಿಲ್ಲ.ಇದನ್ನೂ ಓದಿ: ವಿಜಯ್ ಸೇತುಪತಿ ನಟನೆಯ ‘ಸ್ಲಮ್ ಡಾಗ್’ ಚಿತ್ರದ ಎಮೋಷನಲ್ ಗ್ಲಿಂಪ್ಸ್
ಆರೋಪಿ ಪತ್ತೆಗೆ ಧಾರವಾಡ ಪೊಲೀಸ್ ಆಯುಕ್ತ ಭೂಷಣ ಭೋರಸೆ ಅವರು ವಿಶೇಷ ತಂಡ ರಚಿಸಿದ್ದರು. ಇದೀಗ ಕಾರ್ಯಾಚರಣೆ ನಡೆಸಿದ ತಂಡ ಯಲ್ಲಪ್ಪ ಸೇರಿದಂತೆ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದೆ.ಇದನ್ನೂ ಓದಿ: ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಿಎಂ ಕ್ಷಮೆಯಾಚಿಸಲಿ: ಎ.ಎಸ್.ಪಾಟೀಲ್ ನಡಹಳ್ಳಿ

