ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಂದು ಬಳ್ಳಾರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ಕೆಲವೆಡೆ ಮಳೆ ಮುನ್ಸೂಚನೆ ನೀಡಿತ್ತು. ಬೆಂಗಳೂರಿನ ಹಲವೆಡೆ ಮಳೆ ಆಗಿ ವಾಹನ ಸವಾರರು ಪರದಾಡಿದರು. ಮಂಗಳವಾರ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಹಾಗೂ ತುಮಕೂರಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿಲೋಮೀಟರ್ ಇರಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಚಾಮರಾಜನಗರ | ಬೈಕ್ಗಳ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು
ಬುಧವಾರ ಬಳ್ಳಾರಿ, ಚಾಮರಾಜನಗರ, ಮಂಡ್ಯ, ಮೈಸೂರು, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 4ರಂದು ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಹಾಗೂ ಶಿವಮೊಗ್ಗಕ್ಕೆ ಮಳೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 5ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗಕ್ಕೆ ಮಳೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ದರ್ಶನ್ಗೆ ಬಿಗ್ ಶಾಕ್- ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ಮಾಫಿ ಸಾಕ್ಷ್ಯ ದಾಖಲು

