ಮೈಸೂರು: ಶಾಲಾ ವಾಹನ ಹರಿದು 1.7 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಉದ್ಯೂರು ಗ್ರಾಮದಲ್ಲಿ ನಡೆದಿದೆ.
ಶಾಸ್ತ್ರಿ ಪಬ್ಲಿಕ್ ಸ್ಕೂಲ್‌ನ ಶಾಲಾ ವಾಹನದಿಂದ ಅಪಘಾತವಾಗಿದೆ. ಶಾಲೆಯಿಂದ ಮನೆಗೆ ಬಂದಿದ್ದ 4 ವರ್ಷದ ಬಾಲಕನನ್ನು ತಾಯಿ ವಾಹನದಿಂದ ಇಳಿಸಿಕೊಂಡಿದ್ದರು. ಇದೇ ವೇಳೆ ಪಕ್ಕದಲ್ಲಿದ್ದ 1.7 ವರ್ಷದ ಲತಿಕ್ಷಾಗೆ ಶಾಲಾ ವಾಹನ ಡಿಕ್ಕಿ ಹೊಡೆದಿದೆ. ವಾಹನದ ಚಕ್ರ ಬಾಲಕಿಯ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದೆ.
ವಾಹನ ಚಾಲಕ ಸಿದ್ದರಾಜು (42) ವಿರುದ್ಧ ದೂರು ದಾಖಲಾಗಿದೆ. ವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

