ಕೋಲಾರ: ಬೆಂಗಳೂರು – ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಾರ್ಪಿಯೋ (Scorpio) ಕಾರೊಂದು ಇದ್ದಕ್ಕಿದ್ದಂತೆ ಮಧ್ಯರಾತ್ರಿ ನಡು ರಸ್ತೆಯಲ್ಲಿ ಹೊತ್ತಿ ಉರಿದಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ತಾಲೂಕು ಕೆಂದಟ್ಟಿ ರಾಷ್ಟ್ರೀಯ ಹೆದ್ದಾರಿ-75 ರದೆಂದಟ್ಟಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ರಾಷ್ಟ್ರೀಯ ಹೆದ್ದಾರಿ-75ರ ಕೆಂದಟ್ಟಿ ಬಳಿ ಕಾರು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಇದನ್ನೂ ಓದಿ: ಹರಿಹರ ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭಕ್ಕೆ ಬ್ರೇಕ್ – ನಿಷೇಧಾಜ್ಞೆ ಮುಂದುವರಿಕೆ
ಇನ್ನೂ ಕಾರಿನಲ್ಲಿ ತಾಂತ್ರಿಕ ದೋಷದಿಂದ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇನ್ನೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್ ಬಾಕಿ!

