ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಗ್ರಾಮದಲ್ಲಿ ಉಡ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ತಂದೆ-ಮಗನನ್ನು ಬಂಧಿಸಿದೆ.
ಇನಾಸ್ ಬಸ್ಥ್ಯಾಂವ್ ಸಿದ್ದಿ ಹಾಗೂ ಪ್ರಕಾಶ್ ಇನಾಸ್ ಸಿದ್ದಿ ಬಂಧಿತರು. ಕಾಡಿನಲ್ಲಿ ಉಡ ಬೇಟೆ ಮಾಡಿರುವ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ದೊರತ ಹಿನ್ನೆಲೆಯಲ್ಲಿ ಕಣ್ಣಿಗೇರಿ ಗ್ರಾಮದ ನಿವಾಸಿ ಇನಾಸ್ ಬಸ್ಥ್ಯಾಂವ್ ಸಿದ್ದಿ ಮನೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಎರಡು ಮೃತಪಟ್ಟ ಉಡಗಳು ಪತ್ತೆಯಾಗಿವೆ. ಇದನ್ನೂ ಓದಿ: ಒಡಹುಟ್ಟಿದ ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಅಣ್ಣನಿಂದ ಕೊಲೆ
ಉಡಗಳನ್ನು ಬೇಟೆಯಾಡಿ ಕೊಂದಿರುವ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅವುಗಳ ಮೃತದೇಹಗಳನ್ನು ವಶಕ್ಕೆ ಪಡೆದು ಇಬ್ಬರನ್ನ ಬಂಧಿಸಿದ್ದಾರೆ. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ.

