ಕಾರವಾರ: ಉತ್ತರ ಕನ್ನಡ ಮತ್ತು ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು ಮತ್ತು ಮಡಗಾಂವ್ (Madgaon) ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್(Vande Bharat Express) ರೈಲು ಸಂಪರ್ಕಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಪ್ರಸ್ತುತ ಸಂಚರಿಸುತ್ತಿರುವ ಮಡಗಾಂವ್ – ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರಿಗೆ(Bengaluru) ವಿಸ್ತರಿಸಲಾಗಿದೆ.
ಈ ಕುರಿತು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್(Ashwini Vaishnav) ಅವರು ಪತ್ರದ ಮೂಲಕ ಅಧಿಕೃತ ಮಾಹಿತಿ ನೀಡಿದ್ದಾರೆ ಎಂದು ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwar Hegde Kageri) ಅವರು ತಿಳಿಸಿದ್ದಾರೆ.
“ಬೆಂಗಳೂರು ಮತ್ತು ಮಡಗಾಂವ್ ನಡುವೆ ಹೊಸದಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಬೇಕು ಎಂದು ಮಾರ್ಚ್ 11 ರಂದು ರಂದು ನಾನು ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ್ದೆ. ನಮ್ಮ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಮಡಗಾಂವ್ – ಮಂಗಳೂರು ವಂದೇ ಭಾರತ್ ರೈಲನ್ನು ಮುರ್ಡೇಶ್ವರ, ಗೋಕರ್ಣ ಹಾಗೂ ಕಾರವಾರ ಮಾರ್ಗವಾಗಿ ರಾಜಧಾನಿ ಬೆಂಗಳೂರಿನವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಇದನ್ನೂ ಓದಿ: PUBLiC TV Explainer| ಕೊನೆಗೂ ಕರುನಾಡ ರೈಲು ಜಾಲಕ್ಕೆ ಸೇರಿದ ಮಂಗಳೂರು – ಕೇರಳ ಲಾಬಿಗೆ ಬ್ರೇಕ್!

