ಬೆಂಗಳೂರು: ಕರ್ನಾಟಕದಲ್ಲಿ ಅರ್ಧ ಹೆಲ್ಮೆಟ್ಗೆ (Half Helmet) ಅರ್ಧಚಂದ್ರ. ಇನ್ನು ಮುಂದೆ ದ್ವಿಚಕ್ರ ವಾಹನ ಸವಾರರು ಸುರಕ್ಷಿತವಲ್ಲದ ಅರ್ಧ ಹೆಲ್ಮೆಟ್ ಅನ್ನು ಬಳಸುವಂತಿಲ್ಲ. ಈ ಅಸುರಕ್ಷಿತ ಅರ್ಧ ಹೆಲ್ಮೆಟ್ ಉತ್ಪಾದನೆ ಮತ್ತು ತಯಾರಿಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಅಂತಾ ಸಾರಿಗೆ ಸಚಿವ ಬೈರತಿ ಸುರೇಶ್ (ByrathiSuresh) ಸ್ಪಷ್ಟಪಡಿಸಿದ್ದಾರೆ.
ವಿಕಾಸಸೌಧದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಾರಿಗೆ ಸಚಿವ ಬೈರತಿ ಸುರೇಶ್ ನೇತೃತ್ವದಲ್ಲಿ ನಡೆದ ರಸ್ತೆ ಸುರಕ್ಷತೆ, ಟ್ರಾಫಿಕ್ ನಿಯಮಗಳ ಉಲ್ಲಂಘನೆ ದಂಡದ ವಿಚಾರವಾಗಿ ಸಭೆ ನಡೆಯಿತು.
ಇನ್ನೂ ಕೇವಲ ಸವಾರರ ಮೇಲೆ ಮಾತ್ರ ಅಲ್ಲದೇ, ತಯಾರಿಕ ಕಂಪನಿಗಳ ಮೇಲೂ ಕ್ರಮಕ್ಕೆ ಮುಂದಾಗಿದೆ. ಸಂಚಾರಿ ನಿಯಮದಡಿ ಹಾಫ್ ಹೆಲ್ಮೆಟ್ ಧರಿಸಿ ಸಂಚರಿಸುವ ಅವಕಾಶ ಇಲ್ಲದಿದ್ದರೂ, ತಯಾರಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದು, ಬಹುತೇಕರು ಈ ಹೆಲ್ಮೆಟ್ ಗಳನ್ನ ರೂಲ್ಸ್ ನಿಂದ ತಪ್ಪಿಸಿಕೊಳ್ಳಲು ಮಾತ್ರ ಬಳಕೆ ಮಾಡುತ್ತಿದ್ದಾರೆ. ಇದು ನಿಯಮ ಉಲ್ಲಂಘನೆ ಅನ್ನೋದು ಗೊತ್ತಿದ್ದು ಮಾರಾಟವಾಗುತ್ತಿದ್ದು, ಇದೇ ಕಾರಣಕ್ಕೆ ತಯಾರಿಕಾ ಕಂಪನಿಗಳ ವಿರುದ್ಧವೂ ಕ್ರಮಕ್ಕೆ ಸರ್ಕಾರ ಮುಂದಾಗಲಿದೆ. ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳೋದಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ

