– ಇದು ಓಲೈಕೆ ರಾಜಕಾರಣ ಎಂದ ಬಿಜೆಪಿ
ಬೆಂಗಳೂರು: ಈ ಹಿಂದೆ ಟಿಪ್ಪು ಸುಲ್ತಾನ್ ಜಯಂತಿ(Tipu Jayanti) ಆಚರಣೆಯ ಮೂಲಕ ರಾಜಕೀಯ ಜಟಾಪಟಿಗೆ ಕಾರಣವಾಗಿದ್ದ ಕಾಂಗ್ರೆಸ್ ಸರ್ಕಾರ (Congress Government) ಇದೀಗ ವಿಧಾನಸೌಧದ ಭವ್ಯ ಮೆಟ್ಟಿಲುಗಳ (Vidhana Soudha Grand Step) ಮೇಲೆಯೇ ಅಧಿಕೃತವಾಗಿ ಉರ್ದು ಭಾಷಾ ಹಬ್ಬ(Urdu Habba) ಆಚರಿಸಲು ಮುಂದಾಗಿದೆ. ಸರ್ಕಾರದ ಈ ನಿರ್ಧಾರವು ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ವಿವಾದ ಹಾಗೂ ತೀವ್ರ ಚರ್ಚೆಗೆ ನಾಂದಿ ಹಾಡಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದ ಆಶ್ರಯದಲ್ಲೇ ನವೆಂಬರ್ 9 ರ ‘ಉರ್ದು ದಿನಾಚರಣೆ’ಯ ಅಂಗವಾಗಿ ಈ ಭವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಿದ್ಧತೆಗಳು ನಡೆದಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್(UT Khader), ಉರ್ದು ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆ ಹಾಗೂ ಅದರ ವಿವಿಧ ಕಲಾ ಪ್ರಕಾರಗಳನ್ನು ರಾಜ್ಯದ ಎಲ್ಲಾ ಸಮುದಾಯಗಳ ಜನರಿಗೆ ಪರಿಚಯಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ತಿಳಿಸಿದ್ದಾರೆ.
ಬಿಜೆಪಿ ಆಕ್ರೋಶ
ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಹಿರಿಯ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ (Suresh Kumar) ಸರ್ಕಾರದ ಆದ್ಯತೆಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಇಲ್ಲ – ಬ್ಯಾನ್ ಮಾಡಲು ರಾಜ್ಯ ಸರ್ಕಾರ ನಿರ್ಧಾರ
ಕನ್ನಡಿಗರ ತೆರಿಗೆ ಹಣದಿಂದ ನಡೆಯುವ ಸರ್ಕಾರದ ಅಧಿಕೃತ ವೇದಿಕೆಗಳು ಕೇವಲ ಮತಬ್ಯಾಂಕ್ ರಾಜಕಾರಣದ ತಾಣಗಳಾಗಬಾರದು. ಸರ್ಕಾರ ತಕ್ಷಣವೇ ಈ ಓಲೈಕೆಯ ತೀರ್ಮಾನವನ್ನು ಹಿಂಪಡೆಯಬೇಕು” ಎಂದು ಅವರು ಕಟುವಾಗಿ ಆಗ್ರಹಿಸಿದ್ದಾರೆ.
ಕನ್ನಡ ರಾಜ್ಯೋತ್ಸವದ ತಿಂಗಳಾದ ನವೆಂಬರ್‌ನಲ್ಲೇ ವಿಧಾನಸೌಧದ ಎದುರು ಸರ್ಕಾರಿ ಪ್ರಾಯೋಜಿತ ಉರ್ದು ಹಬ್ಬ ಆಯೋಜಿಸಲು ಮುಂದಾಗಿರುವುದು ಮುಂಬರುವ ದಿನಗಳಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳ ನಡುವೆ ಮತ್ತಷ್ಟು ರಾಜಕೀಯ ಜಟಾಪಟಿಗೆ ಕಾರಣವಾಗುವ ಸಾಧ್ಯತೆಯಿದೆ.

