ಕಾರವಾರ: ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ (KSRTC Bus) ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಒಂದೂವರೆ ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ಅಂಕೋಲಾ (Ankola) ತಾಲೂಕಿನ ಬೆಳಸೆ ಗ್ರಾಮದಲ್ಲಿ ನಡೆದಿದೆ.
ಕುಮಟಾದಿಂದ ಅಂಕೋಲಾಕ್ಕೆ ತೆರಳುತಿದ್ದ ಬಸ್ ಹಾಗೂ ಅಂಕೋಲಾ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಬಸ್ನಲ್ಲಿದ್ದ ಒಂದೂವರೆ ವರ್ಷದ ಗಂಡು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಅಪಘಾತದಲ್ಲಿ 10 ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: KSRTC ಬಸ್, ಲಾರಿ ಮಧ್ಯೆ ಭೀಕರ ಅಪಘಾತ – ಬಸ್ ಚಾಲಕ ದುರ್ಮರಣ, ಹಲವರಿಗೆ ಗಾಯ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೈದರಾಬಾದ್ನಲ್ಲಿ ಭೀಕರ ಹಿಟ್ & ರನ್ – 8 ಮಂದಿಗೆ ಗುದ್ದಿದ ಕಾರು; ಮೂವರ ಸ್ಥಿತಿ ಗಂಭೀರ

