ಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು (Stray Cow) ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು (Kollur Police) ಬಂಧಿಸಿದ್ದಾರೆ.
ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆಯ ಮೊಹಮ್ಮದ್ ಸಿನಾನ್ (20) ಬಂಧಿತ ಆರೋಪಿ. ಕೃತ್ಯಕ್ಕೆ ಬಳಸಿದ್ದ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕಸ ವಿಂಗಡನೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು – ತುಂಡು ತುಂಡಾದ ದೇಹ
ಸೆ.29 ರಂದು ಮಧ್ಯಾಹ್ನ 1:30ರ ಸುಮಾರಿಗೆ ಬಿಳಿ ಬಣ್ಣದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದಿದ್ದ ಅಪರಿಚಿತರು, ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಲವಂತವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರನ್ನು ಪತ್ತೆಹಚ್ಚಿ, ಪ್ರಮುಖ ಆರೋಪಿ ಮೊಹಮ್ಮದ್ ಸಿನಾನ್‌ನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದನ್ನೂ ಓದಿ: ಲಾರಿ, ಪಿಕಪ್ ವ್ಯಾನ್ ನಡುವೆ ಭೀಕರ ಅಪಘಾತ – ಏಳು ಮಂದಿ ದುರ್ಮರಣ, 21 ಜನರಿಗೆ ಗಾಯ

