ಚಿಕ್ಕಬಳ್ಳಾಪುರ: ಶ್ರೀನಿವಾಸ ಸಾಗರ ಡ್ಯಾಮ್ಗೆ ಪ್ರವಾಸಕ್ಕೆ ಬಂದಿದ್ದ ತಾಯಿ, ಮಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಮುಳುಗುತ್ತಿದ್ದ ತಂದೆ ಹಾಗೂ ಮಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ.
ರೇಖಾ (39) ಹೇಮಂತ್ (19) ಮೃತ ದುರ್ದೈವಿಗಳು. ರಾಜು ಹಾಗೂ ಮಗಳು ದೀಪ ಅಪಾಯದಿಂದ ಪಾರಾಗಿದ್ದಾರೆ. ಆಟೋ ಚಾಲಕರಾಗಿರುವ ರಾಜು, ಮಕ್ಕಳಿಗೆ ಗಾಂಧಿ ಜಯಂತಿ ರಜೆ ಇದ್ದಿದ್ದರಿಂದ ಕುಟುಂಬ ಸಮೇತ ಜಲಾಶಯಕ್ಕೆ ಬಂದಿದ್ದರು. ಈ ವೇಳೆ, ಜಲಾಶಯದ ನೀರಿನಲ್ಲಿ ಆಟ ಆಡಲು ನೀರಿನಲ್ಲಿ ಇಳಿದಿದ್ದಾಗ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಲಿಂಗ ಬದಲಾವಣೆಗೆ ಒಪ್ಪದ ತಾಯಿಯ ಬರ್ಬರ ಹತ್ಯೆ – ಅಪ್ರಾಪ್ತರಿಗೆ ಏನು ಶಿಕ್ಷೆ ಅಂತ ಚಾಟ್ ಜಿಪಿಟಿಯಲ್ಲಿ ಸರ್ಚ್ ಮಾಡಿದ್ದ ಬಾಲಕ!
ಅಗ್ನಿಶಾಮಕದಳ ಸಿಬ್ಬಂದಿ ಇಬ್ಬರ ಮೃತ ದೇಹಗಳನ್ನ ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಸಾಗರ | ಬ್ರೇಕ್ ಫೇಲ್ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

