ಮಡಿಕೇರಿ: ನಾಡಿನ ಜೀವನದಿ ತಲಕಾವೇರಿಯಲ್ಲಿ (Talacauvery) ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ (Theerthodbhava) ಇನ್ನೇನು ಕೇವಲ 15 ದಿನಗಳಷ್ಟೇ ಬಾಕಿ ಉಳಿದಿದೆ. ಇದೀಗ ಭಾಗಮಂಡಲ-ತಲಕಾವೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಕ್ರಮವಹಿಸಲಾಗುತ್ತಿದೆ. ಇದರ ನಡುವೆ ಇಲ್ಲಿನ ಅಗತ್ಯ ಕೆಲಸ ಕಾರ್ಯಗಳಿಗಾಗಿ ಕಾವೇರಿ ನೀರಾವರಿ ನಿಗಮದ (CNNL) ಮೂಲಕ 2 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
2 ಕೋಟಿ ರೂ. ಅನುದಾನ ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆಯಾಗಿದ್ದು, ಇದನ್ನು ಜಿಲ್ಲಾಧಿಕಾರಿ ಸೋಮಶೇಖರ್ ಅವರು ಖಚಿತಪಡಿಸಿದ್ದಾರೆ. ತುಲಾ ಸಂಕ್ರಮಣ ಜಾತ್ರೋತ್ಸವದ ಅಂಗವಾಗಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲು ಕಾವೇರಿ ನೀರಾವರಿ ನಿಗಮದ ಮೂಲಕ ಈ ಅನುದಾನ ಒದಗಿಸಲಾಗಿದೆ. ಕಳೆದ ವರ್ಷವೂ 2 ಕೋಟಿ ರೂ. ಅನುದಾನ ನಿಗಮದ ಮೂಲಕ ಮಂಜೂರಾಗಿತ್ತು. ಇದಲ್ಲದೇ ಪ್ರತ್ಯೇಕವಾಗಿ ಕೇವಲ ಜಾತ್ರೋತ್ಸವದ ಸಿದ್ಧತೆ ಮತ್ತಿತರ ಕೆಲಸ ಕಾರ್ಯಗಳಿಗೆ ಸರ್ಕಾರದಿಂದ 75 ಲಕ್ಷ ರೂ. ಅನುದಾನವನ್ನು ಪ್ರತ್ಯೇಕವಾಗಿ ನೀಡಲಾಗುತ್ತಿದೆ. ಇದನ್ನೂ ಓದಿ: 180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ 1 ಕೋಟಿ ರೂ. ಘೋಷಣೆ
ಈ ಬಾರಿಯೂ 75 ಲಕ್ಷ ರೂ. ಅನುದಾನ ಬಿಡುಗಡೆಯಾಗಲಿದೆ ಎಂದು ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ತಲಕಾವೇರಿ ತೀರ್ಥೋದ್ಭವ ಕಾರ್ಯಗಳು ಈಗಾಗಲೇ ಆರಂಭಗೊAಡಿದೆ. ಸೆಪ್ಟೆಂಬರ್ 17 ರಂದು ಪತ್ತಾಯಕ್ಕೆ ಅಕ್ಕಿ ಹಾಕುವ ಮೂಲಕ ತುಲಾ ಸಂಕ್ರಮಣದ ಕೈಂಕರ್ಯಗಳಿಗೆ ಚಾಲನೆ ದೊರೆತಿದೆ. ಅ.5ರಂದು ಬೆಳಗ್ಗೆ 10:30ಕ್ಕೆ ಆಜ್ಞಾ ಮುಹೂರ್ತ, ಅ.15ರಂದು ಅಕ್ಷಯ ಪಾತ್ರ, ಕಾಣಿಕೆ ಡಬ್ಬಿಗಳನ್ನು ಇಡುವ ಕಾರ್ಯದೊಂದಿಗೆ ಈ ಬಾರಿ ಅ.17 ರಂದು ರಾತ್ರಿ 7:50ಕ್ಕೆ ಸಲ್ಲುವ ಮೇಷಲಗ್ನದಲ್ಲಿ ಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವ ನಡೆಯಲಿದೆ. ಇದನ್ನೂ ಓದಿ: ರಾಮ ಮಂದಿರದಲ್ಲಿ `ಮಿಲಿಟರಿ ಮಾದರಿ’ ಶಿಸ್ತು – ಆಡಳಿತದಲ್ಲಿ ಮಹತ್ವದ ಬದಲಾವಣೆ
ಪ್ರಸ್ತುತ ಭಾಗಮಂಡಲ-ತಲಕಾವೇರಿ ವ್ಯಾಪ್ತಿಯಲ್ಲಿ ದೇವಾಲಯ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುವುದು, ಸ್ವಚ್ಛತಾ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ತ್ರಿವೇಣಿ ಸಂಗಮದಲ್ಲಿ ಹೂಳು ತೆಗೆಯುವುದು ಸೇರಿದಂತೆ ಇನ್ನಿತರ ಕೆಲಸ ಕಾರ್ಯಗಳಿಗೆ ಟೆಂಡರ್ ಪ್ರಕ್ರಿಯೆ ನಡೆಯಬೇಕಿದೆ. ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಹಾಕಿ ದಿಗ್ಗಜ ಪರ್ಗತ್ ಸಿಂಗ್ ನೇಮಕ

