ಗಾಂಧಿನಗರ: ಕಾರಿಗೆ CNG ತುಂಬಿಸುವಾಗ ಸಿಲಿಂಡರ್ ಸ್ಫೋಟಗೊಂಡು ಕಾರು (Car) ಛಿದ್ರ ಛಿದ್ರವಾದ ಘಟನೆ ಗುಜರಾತ್ನ (Gujarat) ಕರ್ಜನ್ನಲ್ಲಿ ನಡೆದಿದೆ. ಈ ಸ್ಫೋಟದಿಂದ ಪಕ್ಕದಲ್ಲಿದ್ದ ಎರಡು ವಾಹನಗಳಿಗೂ ಹಾನಿಯಾಗಿದೆ.
ಕರ್ಜನ್ನ ರಾಷ್ಟ್ರೀಯ ಹೆದ್ದಾರಿ-48 ರಲ್ಲಿರುವ ಸಿಎನ್ಜಿ ಪಂಪ್ನಲ್ಲಿ ಕಾರಿಗೆ ಸಿಎನ್ಜಿ ತುಂಬಿಸುತ್ತಿದ್ದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಪಂಪ್ನಲ್ಲಿದ್ದ ಸಿಬ್ಬಂದಿ ಮತ್ತು ಸಾರ್ವಜನಿಕರು ಭಯದಿಂದ ಓಡಿಹೋಗಿದ್ದಾರೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ಬಳಿಕ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇದನ್ನೂ ಓದಿ: ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟ – ನಾಲ್ವರು ಸಾವು
ಸ್ಫೋಟದ ತೀವ್ರತೆಗೆ ಕಾರಿನ ಲೋಹದ ಭಾಗಗಳು ಮತ್ತು ಗಾಜಿನ ಚೂರುಗಳು ತುಂಬಾ ದೂರದವರೆಗೆ ಹಾರಿ ಬಿದ್ದಿದ್ದವು. ಕಾರಿನಲ್ಲಿ ಯಾರು ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರುನಲ್ಲಿ ಯಾರಾದರೂ ಇದ್ದಿದ್ದರೆ ಪ್ರಾಣ ಹಾನಿಯಾಗುವ ಸಂಭವ ಇರುತ್ತಿತ್ತು.
ಸ್ಫೋಟದ ಬಗ್ಗೆ ಮಾಹಿತಿ ಪಡೆದ ಕರ್ಜನ್ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ಅವಘಡ ಸಂಭವಿಸಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಪಂಪ್ನಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲಿ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ

