ಬೆಂಗಳೂರು: ಕೆಪಿಎಸ್ಸಿ ನೇಮಕಾತಿಯಲ್ಲಿ ಹಗರಣ (KPSC Scam) ಪ್ರಕರಣ ಸಂಬಂಧ ಐಎಎಸ್ ಅಧಿಕಾರಿ ಗ್ಯಾನೇಂದ್ರನನ್ನು (Gyanendra Kumar) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಿಚಾರಣೆ ಸಂಬಂಧ ಗ್ಯಾನೇಂದ್ರನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. 14 ದಿನಗಳ ಬಳಿಕ ಇಂದು ಗ್ಯಾನೇಂದ್ರನನ್ನು ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದನ್ನೂ ಓದಿ: ರಾಜ್ಯಕ್ಕೆ ನ್ಯಾಯಸಮ್ಮತ ಪರಿಹಾರ ದೊರಕಿಸಿ – 7,142.64 ಕೋಟಿ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಡಿಕೆಶಿ ಮನವಿ
ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈ ಹಿನ್ನೆಲೆ ಇಡಿ ಅಧಿಕಾರಿಗಳು ಗ್ಯಾನೇಂದ್ರನನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬರ – ಜಿಲ್ಲೆಗಳಿಗೆ ಭೇಟಿ, ಕೇಂದ್ರ ತಂಡದಲ್ಲಿ ಯಾರಿದ್ದಾರೆ?

