ಮಡಿಕೇರಿ: ವರ್ಷಗಳ ಕಾಲ ಕುವೈತ್ನಲ್ಲಿ (Kuwait) ದುಡಿದು, ಕುಟುಂಬದೊಂದಿಗೆ ಸಮಯ ಕಳೆಯಲು ಸ್ವದೇಶಕ್ಕೆ ಮರಳಿದ್ದ ಸುಂಟಿಕೊಪ್ಪದ (Suntikoppa) ವ್ಯಕ್ತಿಯೊಬ್ಬರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ (Kempegowda Airport) ಹೃದಯಾಘಾತದಿಂದ (Heart Attack) ಮೃತಪಟ್ಟಿರುವ ಘಟನೆ ನಡೆದಿದೆ.
ಸುಂಟಿಕೊಪ್ಪ ಕೆಇಬಿ ಸಮೀಪದ ಮಾಸ್ಟರ್ ಬಡಾವಣೆ ನಿವಾಸಿ ಬಶೀರ್ ಮೃತ ದುರ್ದೈವಿ. ಹೌದು, ಬದುಕು ಕಟ್ಟಿಕೊಳ್ಳಲೆಂದು ತಾಯ್ನಾಡಿನಿಂದ ಸಾವಿರಾರು ಕಿಲೋಮೀಟರ್ ದೂರದ ಕುವೈತ್ಗೆ ತೆರಳಿದ್ದ ಬಶೀರ್, ಹಲವು ವರ್ಷಗಳಿಂದ ಅಲ್ಲಿಯೇ ಕೆಲಸ ಮಾಡಿಕೊಂಡಿದ್ದರು. ತಾವು ದುಡಿದ ಹಣವನ್ನು ಸುಂಟಿಕೊಪ್ಪದಲ್ಲಿದ್ದ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿಗೆ ಕಳುಹಿಸುತ್ತಿದ್ದರು. ಇದೇ ಹಣದಿಂದ ಕುಟುಂಬದ ಜೀವನ ಸಾಗುತ್ತಿತ್ತು. ವರ್ಷಗಳ ಬಳಿಕ ಸಿಕ್ಕ ರಜೆಯಲ್ಲಿ ಪತ್ನಿ ಹಾಗೂ ಮಕ್ಕಳೊಂದಿಗೆ ಸಮಯ ಕಳೆಯಬೇಕೆಂಬ ಆಸೆಯಿಂದ ಬಶೀರ್ ಕುವೈತ್ನಿಂದ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಇದನ್ನೂ ಓದಿ: ಫ್ಲೈದುಬೈ ಘಟನೆ ಶ್ಲಾಘಿಸಿದ ಅಲ್ ಖೈದಾ; ದುಷ್ಟ ಅಮೆರಿಕ ಅಂತ್ಯವಾಗಲಿದೆ ಎಂದು ಸಂದೇಶ
ಆದರೆ, ವಿಧಿಯಾಟವೇ ಬೇರೆಯಾಗಿತ್ತು. ಶನಿವಾರ ರಾತ್ರಿ ಸುಮಾರು 3 ಗಂಟೆ ವೇಳೆಗೆ ಕುವೈತ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಶೀರ್ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಹೃದಯಾಘಾತಕ್ಕೊಳಗಾಗಿ ವಿಮಾನ ನಿಲ್ದಾಣದಲ್ಲೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಟ್ರೆಕ್ಕಿಂಗ್ ವೇಳೆ ಈಜಲು ಹೋಗಿ ನಾಪತ್ತೆಯಾಗಿದ್ದ ಟೆಕ್ಕಿ ಮೃತದೇಹ ಪತ್ತೆ
ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಬೆಂಗಳೂರಿಗೆ ತೆರಳಿದ್ದು, ಸದ್ಯ ಬಶೀರ್ ಅವರ ಮೃತದೇಹ ಬೆಂಗಳೂರಿನಲ್ಲಿದೆ. ಮೃತದೇಹವನ್ನು ಸುಂಟಿಕೊಪ್ಪಕ್ಕೆ ತಂದು ಕುಟುಂಬಸ್ಥರು ಹಾಗೂ ಬಂಧು-ಬಳಗದ ಅಂತಿಮ ದರ್ಶನದ ಬಳಿಕ ಇಂದು ಮಧ್ಯಾಹ್ನ 3 ಗಂಟೆಯ ನಂತರ 7ನೇ ಹೊಸಕೋಟೆಯ ಮುಸ್ಲಿಂ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ. ಇದನ್ನೂ ಓದಿ: ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ರಾವ್ ನಿಧನ – ಉಮಾಶ್ರೀ ಸಂತಾಪ
ಕುಟುಂಬದೊಂದಿಗೆ ಸಂತಸದ ಕ್ಷಣ ಕಳೆಯಲು ಸ್ವದೇಶಕ್ಕೆ ಮರಳಿದ್ದ ವ್ಯಕ್ತಿ, ವಿಮಾನ ನಿಲ್ದಾಣದಲ್ಲೇ ಹೃದಯಾಘಾತಕ್ಕೆ ಬಲಿಯಾಗಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ತಾರಕಕ್ಕೇರಿದ SIR ಹಗ್ಗ ಜಗ್ಗಾಟ; ಬಿಜೆಪಿ BLA 1 ಮೋತ್ಕರ್ ಶ್ರೀನಿವಾಸ್ ಮೇಲೆ ಸರ್ಚ್ ವಾರಂಟ್

