ಮುಂಬೈ: ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಹಿನ್ನೆಲೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಮುಬೈನಲ್ಲಿ ಪ್ರತಿಭಟನೆ ನಡೆಯಿತು.
ಈ ಜಂಟಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಎನ್ಸಿಪಿ (ಎಸ್ಪಿ) ರಾಜ್ಯ ನಾಯಕರು ಸೇರಿದಂತೆ ಹಲವಾರು ಜನ ಭಾಗವಹಿಸಿದ್ದರು.
ಪ್ರತಿಭಟನೆಯ ಸಮಯದಲ್ಲಿ CEC ಜ್ಞಾನೇಶ್ರನ್ನ ಟೀಕಿಸಿದ ರಾಜ್ ಠಾಕ್ರೆ, ಮಹಾರಾಷ್ಟ್ರದಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ಮತದಾನ ಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ಗಳನ್ನು ಬಳಸಿ ಚುನಾವಣೆಗಳನ್ನು ನಡೆಸಬೇಕೆಂದು ಕರೆ ನೀಡಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ , ದೇಶದಲ್ಲಿನ ಸರ್ವಾಧಿಕಾರಿ ಆಡಳಿತವನ್ನು ಸಂಪೂರ್ಣವಾಗಿ ವಿರೋಧಿಸಿ ಈ ಪ್ರತಿಭಟನೆಯನ್ನ ನಡೆಸಲಾಗುತ್ತಿದೆ. ಮತದಾರರ ಪಟ್ಟಿಯಿಂದ ದೊಡ್ಡ ಪ್ರಮಾಣದಲ್ಲಿ ಹೆಸರುಗಳನ್ನು ಅಳಿಸಲಾಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ನಕಲಿ ಮತ ಹಾಕಿಸುತ್ತಿದ್ದ ಕಾಂಗ್ರೆಸ್ನವರಿಗೆ SIR ನಿಂದ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ
ಹಿಟ್ಲರ್ ಕೂಡ ಇದೇ ರೀತಿ ಸರ್ವಾಧಿಕಾರಿಯಾಗಿದ್ದ. ಆದರೆ, ಅಂತಿಮವಾಗಿ ಹಿಟ್ಲರ್ ತಾನೇ ಗುಂಡು ಹಾರಿಸಿಕೊಂಡ. ಈ ದೇಶದಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಉದ್ಭವಿಸಬಹುದು. ನಿರಂಕುಶವಾಗಿ ವರ್ತಿಸುವವರು ಇದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ಕಿಡಿಕಾರಿದರು.ಇದನ್ನೂ ಓದಿ: SIR ಫೈಟ್ ತೀವ್ರ – ಸೋಮವಾರ `ಕೈ’ ಪಡೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

