– ಅ.18 ರಿಂದ 23 ರವರೆಗೆ ಆಯೋಜನೆ
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್‌ಎಸ್ (KRS) ಅಣೆಕಟ್ಟಿನ ಬಳಿ ಆಯೋಜಿಸಲು ಉದ್ದೇಶಿಸಲಾಗಿದ್ದ ಕಾವೇರಿ ಆರತಿ (Cauvery Aarti) ಕಾರ್ಯಕ್ರಮದ ದಿನಾಂಕವನ್ನು ಮುಂದೂಡಲಾಗಿದೆ.
ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯ ಪ್ರಕಾರ ಅ.11 ರಿಂದ ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆರಂಭವಾಗಬೇಕಿತ್ತು. ಇದನ್ನೂ ಓದಿ: ರಾಯಚೂರು | ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬರ ಅಧ್ಯಯನ ನಡೆಸಿದ ಕೇಂದ್ರ ತಂಡ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿತ್ತು. ಆದರೆ, ಅಂದು ಅವರಿಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವುದರಿಂದ ಕಾರ್ಯಕ್ರಮದ ದಿನಾಂಕವನ್ನು ಬದಲಾಯಿಸಲಾಗಿದೆ. ಇದೀಗ ಪರಿಷ್ಕೃತ ದಿನಾಂಕದಂತೆ, ಅಕ್ಟೋಬರ್ 18 ರಿಂದ 23 ರವರೆಗೆ ಸತತವಾಗಿ ಕೆಆರ್‌ಎಸ್ ಡ್ಯಾಂ ಬಳಿ ಕಾವೇರಿ ಆರತಿ ಜರುಗಲಿದೆ.
ಕಳೆದ ವರ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಆರಂಭಗೊಂಡಿತ್ತು. ಅದೇ ಸಂಪ್ರದಾಯವನ್ನು ಮುಂದುವರಿಸಿಕೊಂಡು, ಈ ಬಾರಿಯೂ ಕೆಆರ್‌ಎಸ್ ಆವರಣದಲ್ಲಿ ಅತ್ಯಂತ ಅದ್ದೂರಿಯಾಗಿ ಕಾವೇರಿ ಆರತಿ ನೆರವೇರಿಸಲು ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇದನ್ನೂ ಓದಿ: ವೋಟ್‌ಚೋರಿಗೆ SIR ದುರ್ಬಳಕೆ..? – ಬೆಂಗಳೂರಿನ ಜನರಿಗೂ ಸಿಎಂ ಡಿಕೆಶಿ ಎಚ್ಚರಿಕೆ

