ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಅವರು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ (Head Coach) ಆಗಿ ನೇಮಕಗೊಂಡಿದ್ದಾರೆ. ಈ ಮಹತ್ವದ ನಿರ್ಧಾರವನ್ನು ಡೆಲ್ಲಿ ಕ್ಯಾಪಿಟಲ್ಸ್ ಆಡಳಿತ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ.
2019ರಲ್ಲಿ ಸಲಹೆಗಾರರಾಗಿ ಡೆಲ್ಲಿ ಕ್ಯಾಪಿಟಲ್ಸ್(Delhi Capitals) ಜೊತೆ ಕೈಜೋಡಿಸಿದ್ದ ಗಂಗೂಲಿ, ಬಳಿಕ ಪುರುಷ ಹಾಗೂ ಮಹಿಳಾ ಎರಡೂ ತಂಡಗಳ ‘ಡೈರೆಕ್ಟರ್ ಆಫ್ ಕ್ರಿಕೆಟ್’ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಇದೀಗ ಮುಂಬರುವ ಐಪಿಎಲ್ ಆವೃತ್ತಿಗಾಗಿ ಮುಖ್ಯ ಕೋಚ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
Dilli, it’s time for Dadagiri 🐅
Sourav Ganguly, Head Coach of the Tigers 🔥 https://t.co/EMTPQ9TB64
— Delhi Capitals (@DelhiCapitals) October 6, 2026
ಕೋಚ್ ಆಗಿ ನೇಮಕಗೊಂಡ ಬಳಿಕ ಸಂತಸ ಹಂಚಿಕೊಂಡ ಗಂಗೂಲಿ, ಐಪಿಎಲ್‌ನಲ್ಲಿ ಮುಖ್ಯ ಕೋಚ್ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದು ನನಗೆ ಅಪಾರ ಸಂತೋಷ ತಂದಿದೆ. ಡೆಲ್ಲಿ ಕ್ಯಾಪಿಟಲ್ಸ್ ನನ್ನ ಹೃದಯಕ್ಕೆ ಅತ್ಯಂತ ಹತ್ತಿರವಾದ ಫ್ರಾಂಚೈಸಿ. ಮಾಲೀಕರು, ಮ್ಯಾನೇಜ್‌ಮೆಂಟ್, ಸಹಾಯಕ ಸಿಬ್ಬಂದಿ ಹಾಗೂ ಆಟಗಾರರೊಂದಿಗೆ ನನಗೆ ಉತ್ತಮ ಒಡನಾಟವಿದೆ. ನಮ್ಮ ಬಳಿ ಅದ್ಭುತ ಪ್ರತಿಭೆಗಳಿದ್ದು, ಇತ್ತೀಚಿನ ವರ್ಷಗಳಲ್ಲಿ ತಂಡ ಅತ್ಯುತ್ತಮ ಕ್ರಿಕೆಟ್ ಆಡಿದೆ. ಹೊಸ ಸೀಸನ್‌ನಲ್ಲಿ ಇಡೀ ತಂಡದೊಂದಿಗೆ ಕೆಲಸ ಮಾಡಿ, ಬಲಿಷ್ಠ ಹಾಗೂ ನಿರ್ಭೀತ ತಂಡವನ್ನು ಕಟ್ಟಲು ನಾನು ಕಾತರನಾಗಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಯಕಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಪ್ರಕಟಿಸಿದ ಹರ್ಮನ್‌ಪ್ರೀತ್ ಕೌರ್

