ನವದೆಹಲಿ: ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಆತ್ಮಹತ್ಯೆಯ ವಿಚಾರ. ಹೀಗಾಗಿ ಜ್ಞಾನೇಶ್ ಕುಮಾರ್ (Gyanesh Kumar) ರಾಜೀನಾಮೆ ನೀಡಲೇಬೇಕು ಎಂದು ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ (BK Hariprasad) ಒತ್ತಾಯಿಸಿದರು.
ಈ ಕುರಿತು ದೆಹಲಿಯಲ್ಲಿ ಮಾತನಾಡಿದ ಅವರು, ಇಬ್ಬರು ಚುನಾವಣಾ ಆಯುಕ್ತರು ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಳೆದ ಹತ್ತು ತಿಂಗಳಲ್ಲಿ 14 ಬಾರಿ ಆಕ್ಷೇಪಣೆ ಸಲ್ಲಿಸಲಾಗಿದೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೂಡ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದರು. ಇದನ್ನೂ ಓದಿ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಬಂಧನ
ದೇಶದಲ್ಲಿ ದಬ್ಬಾಳಿಕೆ ನಡೆಯುವುದಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ವ್ಯವಸ್ಥೆ ಬದಲಿಗೆ ಸರ್ವಾಧಿಕಾರಿ ಧೋರಣೆ ಪ್ರದರ್ಶಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಭಯಗೊಂಡಿದೆ. ಮತ ಕಳ್ಳತನದ ಭಯ ಅವರನ್ನು ಕಾಡುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ನೇಮಕಾತಿ ಅಕ್ರಮ ಕೇಸ್; ಶಾಂತ ಹೊಸಮನಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಕಾರ
ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ರಾಜ್ಯ ಘಟಕಗಳ ಅಧ್ಯಕ್ಷರ ಸಭೆ ನಡೆದಿದ್ದು, ಮುಂದಿನ ಎರಡು ತಿಂಗಳ ಹೋರಾಟಕ್ಕೆ ರೂಪುರೇಷೆ ಸಿದ್ಧಪಡಿಸುವಂತೆ ಸೂಚಿಸಲಾಗಿದೆ. ಅಕ್ಟೋಬರ್ 8ರಂದು ಕೆಪಿಸಿಸಿಯಲ್ಲಿ ಸಭೆ ನಡೆಸಿ, ಮುಂದಿನ ಎರಡು ತಿಂಗಳ ಕಾಲ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುವುದು. `ವೋಟ್ ಬಚಾವ್, ದೇಶ ಬಚಾವ್’ ಹೆಸರಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ಅವರ ಮನೆಯಲ್ಲಿ ಏನಾಗ್ತಿದೆ ಅಂತ ಮೊದಲು ತಿಳಿದುಕೊಳ್ಳಲಿ: ಪ್ರಿಯಾಂಕ್ ಖರ್ಗೆ
ಆರ್. ಅಶೋಕ್ ಹೇಳಿಕೆಗೆ ತಿರುಗೇಟು:
ಹರಿಪ್ರಸಾದ್ ಒಂದು ಚುನಾವಣೆಯನ್ನೂ ಗೆದ್ದಿಲ್ಲ ಎಂಬ ಬಿಜೆಪಿ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಚುನಾವಣೆ ಗೆದ್ದಿದ್ದೇನೋ, ಸೋತಿದ್ದೇನೋ ಬೇರೆ ವಿಚಾರ. ವಿದ್ಯಾರ್ಥಿ ದೆಸೆಯಿಂದಲೇ ರಾಜಕೀಯದಲ್ಲಿದ್ದೇನೆ. ನಾನು ಮೂರು ಚುನಾವಣೆ ಸೋತಿದ್ದೇನೆ, ಆದರೆ ಸತ್ತಿಲ್ಲ. ರಾಜಕೀಯದಿಂದ ದೂರ ಓಡಿಹೋಗಿಲ್ಲ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಫ್ಲೈದುಬೈ ವಿಮಾನದ ಹೀರೊ ಸ್ಮಿತ್ ಮಚ್ಚಾರ್ ತಲೆಬುರುಡೆ ಮೂಳೆ ಮುರಿತ; ಸೌದಿಯಲ್ಲಿ ಶಸ್ತ್ರಚಿಕಿತ್ಸೆ
ತಮ್ಮ ವಿರುದ್ಧದ ಟೀಕೆಗೆ ಪ್ರತಿಯಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನೂ ಪ್ರಸ್ತಾಪಿಸಿದ ಹರಿಪ್ರಸಾದ್, ಅವರ ಪಿತೃಪಕ್ಷದ ನಾಯಕ ಮೋಹನ್ ಭಾಗವತ್ ಯಾವ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಪ್ರಶ್ನಿಸಿದರು. ಭಾಗವತ್ ಯಾವ ಚುನಾವಣೆ ಗೆದ್ದಿದ್ದಾರೆ? ದೇಶವನ್ನೇ ಅಲ್ಲೋಲ-ಕಲ್ಲೋಲ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಫಾರ್ಮ್ 7 ದುರುಪಯೋಗ, SIT ರಚನೆ ಮಾಡಲಿ: ರಾಮಲಿಂಗಾರೆಡ್ಡಿ
ಪ್ರಧಾನಿ ನರೇಂದ್ರ ಮೋದಿ ಗ್ರಾಮ ಪಂಚಾಯಿತಿ ಚುನಾವಣೆಯಿಂದ ರಾಜಕೀಯ ಆರಂಭಿಸಿ ನೇರವಾಗಿ ಮುಖ್ಯಮಂತ್ರಿಯಾಗಿದ್ದರು ಎಂದು ಹೇಳಿದ ಹರಿಪ್ರಸಾದ್, ಇವರಿಂದ ನಾನು ಪಾಠ ಕಲಿಯಬೇಕಿಲ್ಲ. ಸೋತರೆ ಇವರು ಎಲ್ಲೂ ಕಾಣುವುದಿಲ್ಲ. ರಾಜಕೀಯದ ಇತಿಮಿತಿ ಗೊತ್ತಿಲ್ಲದ ಇಂತಹವರ ಪ್ರಶ್ನೆಗೆ ನಾನು ಉತ್ತರಿಸುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಶೋ ಮಾಡೋದಕ್ಕೆ ನನ್ನ ವಿರುದ್ದ ದೂರು ನೀಡಿದ್ದಾರೆ: ರಾಮಮೂರ್ತಿ

