ಚಿತ್ರದುರ್ಗ: ಲಾರಿಗೆ (Lorry) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyur) ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ನಡೆದಿದೆ.
ಘಟನೆಯಲ್ಲಿ ಕಾರಲ್ಲಿದ್ದ ಕುಷ್ಟಗಿ ಮೂಲದ ಶಶಿಧರ್ (22), ಮಂಜುನಾಥ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿರಿಯೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಸವರಾಜ್ (21) ಮೃತಪಟ್ಟಿದ್ದಾರೆ. ಕಾರಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಉಡುಪಿ: 18 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್
ಲಾರಿ ಟೈರ್ ಸಿಡಿದು ಧಿಡೀರ್ ಎಡಕ್ಕೆ ತಿರುಗಿದ ಪರಿಣಾಮ ಹಿಂದೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಲಾರಿಗೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಘಟನೆ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೇಂದ್ರದಿಂದ 2 ಮಹತ್ವದ ನಿರ್ಧಾರ; ಸಾರಿಗೆಗೆ ಹೊಸ ಪ್ರಾಧಿಕಾರ, ಸಣ್ಣ ಉದ್ಯಮಗಳಿಗೆ 10 ಸಾವಿರ ಕೋಟಿ ರೂ. ನಿಧಿ

