ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ಪ್ರದೋಷ್‌ನನ್ನು (Pradosh) ಮಾಫಿ ಸಾಕ್ಷಿಯನ್ನಾಗಿ ಮಾಡಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ (Supreme Court) ನಡೆಯಿತು. ವಿಚಾರಣೆ ವೇಳೆ ವಿಜಯಲಕ್ಷ್ಮೀ ಪರ ಹಿರಿಯ ವಕೀಲ ನಾಗಮುತ್ತು ಅವರು, ಪ್ರದೋಷ್ ಮಾಫಿ ಸಾಕ್ಷಿಯಾಗಿರುವ ಪ್ರಕ್ರಿಯೆಯಲ್ಲಿ ಕಾನೂನಾತ್ಮಕ ಲೋಪಗಳಿವೆ ಎಂದು ವಾದಿಸಿದರು.
ಟ್ರಯಲ್ ಸಂದರ್ಭದಲ್ಲಿ ಆರೋಪಿಯಾಗಿದ್ದ ಪ್ರದೋಷ್, ವಕೀಲರ ಮೂಲಕ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಯನ್ನು ಪ್ರಾಸಿಕ್ಯೂಷನ್ ಒಪ್ಪಿಕೊಂಡಿದ್ದು, ವಿಚಾರಣಾ ನ್ಯಾಯಾಲಯವೂ ಮಾಫಿ ಸಾಕ್ಷಿಯಾಗಲು ಅನುಮತಿ ನೀಡಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದ ಹಿನ್ನೆಲೆಯಲ್ಲಿ ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ ಎಂದು ನಾಗಮುತ್ತು ವಾದಿಸಿದರು. ಇದನ್ನೂ ಓದಿ: ಪೊಲೀಸ್, RAF ಸಿಬ್ಬಂದಿಗೆ ಬಾಡಿ ಕ್ಯಾಮೆರಾ – 6 ತಿಂಗಳಲ್ಲಿ ಕ್ರಮಕ್ಕೆ ನಿರ್ದೇಶಿಸಿದ ದೆಹಲಿ ಹೈಕೋರ್ಟ್
ಪ್ರದೋಷ್ ಸೆಕ್ಷನ್ 164ರ ಅಡಿಯಲ್ಲಿ ಯಾವುದೇ ಹೇಳಿಕೆ ದಾಖಲಿಸಿಲ್ಲ. ಅಲ್ಲದೆ, ಸೆಕ್ಷನ್ 161ರ ಅಡಿಯಲ್ಲಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಯೂ ನಡೆದಿಲ್ಲ. ಸೆಕ್ಷನ್ 364ರ ಪ್ರಕ್ರಿಯೆಯನ್ನೂ ಪಾಲಿಸಲಾಗಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದನ್ನೂ ಓದಿ: ಸ್ಟಿಂಗ್ ಆಪರೇಷನ್, ಪೆನ್‌ಡ್ರೈವ್ ಪಿತಾಮಹ ಕುಮಾರಸ್ವಾಮಿ: ಬಾಲಕೃಷ್ಣ
ಯಾವುದೇ ಹಿಂದಿನ ಹೇಳಿಕೆ ಇಲ್ಲದಿದ್ದರೂ ಕೇವಲ ವಕೀಲರ ಮೂಲಕ ಸಲ್ಲಿಸಲಾದ ಅರ್ಜಿಯ ಆಧಾರದ ಮೇಲೆ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಫಿ ಸಾಕ್ಷಿಯನ್ನಾಗಿ ಮಾಡುವ ಪ್ರಕ್ರಿಯೆಯಲ್ಲಿ ಕಾನೂನಾತ್ಮಕ ತೊಡಕುಗಳಿವೆ ಎಂದು ನಾಗಮುತ್ತು ವಾದಿಸಿದರು. ಇದನ್ನೂ ಓದಿ: ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್: ಹೆಚ್‌ಡಿಕೆ ಬಾಂಬ್
ವಾದದ ವೇಳೆ ನಾಗಮುತ್ತು ಅವರು ಸಂಬಂಧಿತ ಕೆಲವು ಪ್ರಕರಣಗಳ ತೀರ್ಪುಗಳನ್ನೂ ಸುಪ್ರೀಂಕೋರ್ಟ್ಗೆ ಸಲ್ಲಿಸಿದರು. ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವುದಕ್ಕೆ ತಡೆ ನೀಡುವಂತೆ ಅವರು ಮನವಿ ಮಾಡಿದರು. ವಾದ ಆಲಿಸಿದ ಸುಪ್ರೀಂಕೋರ್ಟ್ ಮತ್ತಷ್ಟು ಮಾಹಿತಿ ಸಲ್ಲಿಕೆಗೆ ಸೂಚಿಸಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು. ಇದನ್ನೂ ಓದಿ: ಶಿಕಾರಿಪುರ | ಹರಿಗೆ ಗ್ರಾಮದಲ್ಲಿ ಬೀಗರೂಟ ಬ್ಯಾನ್ – ಊಟ ಹಾಕಿಸಿದ್ರೆ 1 ಲಕ್ಷ, ಊಟ ಮಾಡಿದ್ರೆ 50 ಸಾವಿರ ದಂಡ

