ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ ಎಂಬ ಚರ್ಚೆಗಳ ಬೆನ್ನಲ್ಲೇ, ಖುದ್ದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar) ಅವರು ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್(Sting Operation) ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಬಳಿಗೂ ಕೆಲವರು ಜಿಎಸ್‌ಟಿ ಇತ್ಯಾದಿ ಬೇರೆ ಬೇರೆ ವಿಚಾರಗಳನ್ನು ಮಾತನಾಡಲು ಬಂದಿದ್ದರು. ನನ್ನಿಂದಲೇ ಈ ಸ್ಟಿಂಗ್ ಆಪರೇಷನ್ ಆರಂಭಿಸಲು ಯತ್ನಿಸಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್: ಹೆಚ್‌ಡಿಕೆ ಬಾಂಬ್
ನನಗೆ ಅವರ ಮೇಲೆ ಮುಂಚಿತವಾಗಿಯೇ ಅನುಮಾನ ಬಂದ ಹಿನ್ನೆಲೆಯಲ್ಲಿ, ಪೊಲೀಸರ ಮೂಲಕ ಸಂಪೂರ್ಣ ಮಾಹಿತಿ ಪಡೆದು ಎಲ್ಲಾ ದಾಖಲೆಗಳು ಹಾಗೂ ಫೋಟೋಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದೇನೆ. ಅಗತ್ಯಬಿದ್ದರೆ ಫೋಟೋಗಳನ್ನು ಬಿಡುಗಡೆ ಮಾಡುತ್ತೇನೆ. ಈ ಷಡ್ಯಂತ್ರದ ಹಿಂದೆ ಯಾರ್ಯಾರಿದ್ದಾರೆ, ಯಾರು ಇದಕ್ಕೆ ಹಣಕಾಸು ಒದಗಿಸುತ್ತಿದ್ದಾರೆ ಇದರ ಪಿತಾಮಹ ಯಾರು ಎಂಬುದು ನನಗೆ ಸ್ಪಷ್ಟವಾಗಿ ತಿಳಿದಿದೆ. ಕುಂಬಳಕಾಯಿ ಕಳ್ಳ ಅಂದರೆ ಕೆಲವರು ಹೆಗಲು ಮುಟ್ಟುಕೊಳ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸ್ಟಿಂಗ್ ಆಪರೇಷನ್, ಪೆನ್‌ಡ್ರೈವ್ ಪಿತಾಮಹ ಕುಮಾರಸ್ವಾಮಿ: ಬಾಲಕೃಷ್ಣ

