ದಾವಣಗೆರೆ: ಆನ್ಲೈನ್ ಗೇಮ್ (Online Games) ಗೀಳಿನಿಂದ ಸ್ನೇಹಿತರು ನೀಡಿದ ಟಾರ್ಚರ್ಗೆ ಬೇಸತ್ತು ಬಾಲಕನೊಬ್ಬ ನೇಣಿಗೆ ಶರಣಾದ ಘಟನೆ ಚನ್ನಗಿರಿ (Channagiri)ತಾಲೂಕಿನ ಪಾಂಡೊಮಟ್ಟಿಯಲ್ಲಿ ನಡೆದಿದೆ.
ಮನೋಜ್ ಟಿ.ಆರ್ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಗ್ರಾಮದ ನಾಲ್ವರು ಬಾಲಕರು ಫ್ರೀ ಫೈರ್ ಗೇಮ್ ಆಪ್ನಲ್ಲಿ ಹಣ ಹಾಕುವಂತೆ ಒತ್ತಾಯಿಸಿದ್ದರು. ಹಣ ತರದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದೇ ಕಾರಣಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಸಚಿವ ಖಂಡ್ರೆ ತವರಲ್ಲೇ ಗ್ರಾ.ಪಂ ಡಾಟಾ ಎಂಟ್ರಿ ಆಪರೇಟರ್ ಮೇಲೆ ಹಲ್ಲೆ – ವಿಡಿಯೋ ವೈರಲ್
ಸ್ನೇಹಿತರು ಒತ್ತಾಯಕ್ಕೆ ಮನೆಯಿಂದ ಸುಮಾರು 4 ಲಕ್ಷ ರೂ. ಹಣವನ್ನು ಮನೋಜ್ ತೆಗೆದುಕೊಂಡುಹೋಗಿದ್ದ. ಮನೆಯಲ್ಲಿ ಇಟ್ಟಿದ್ದ ಹಣದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ, ಪರಿಶೀಲನೆ ನಡೆಸಿದಾಗ ನಾಲ್ವರು ಹಣ ತರುವಂತೆ ಒತ್ತಾಯಿಸಿರುವುದು ಗೊತ್ತಾಗಿದೆ. ಅಲ್ಲದೇ ಹಣಕ್ಕಾಗಿ ಮಗನ ಮೇಲೆ ಹಲ್ಲೆ ಸಹ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಚನ್ನಗಿರಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವು

