ಚಿಕ್ಕೋಡಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ(Electric Short Circuit) ಉಂಟಾದ ಕಿಡಿ ಕಬ್ಬಿನ ಗದ್ದೆಗೆ(Sugarcane Farm Land) ತಗುಲಿ ಸುಮಾರು 30 ಎಕರೆ ಪ್ರದೇಶದ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ಚಿಕ್ಕೋಡಿ(Chikkodi) ತಾಲೂಕಿನ ಕಾಡಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕಾಡಾಪುರ ಗ್ರಾಮದ ಹೊರವಲಯದಲ್ಲಿರುವ ನಾರಾಯಣ ಕೋರೆ, ಸುರೇಶ್ ಕೋರೆ, ನೇತಾಜಿ ಜಾಧವ, ಸಿದ್ದಪ್ಪ ಕರಿಗಾರ ಹಾಗೂ ರಾಮಾ ಢಂಗಗೆ ಸೇರಿದ ಜಮೀನುಗಳಲ್ಲಿ ಬೆಳೆದಿದ್ದ ಕಬ್ಬಿನ ಗದ್ದೆಗಳಿಗೆ ಬೆಂಕಿ ವ್ಯಾಪಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಿಡಿ ಹೊತ್ತಿಕೊಂಡು ಕಬ್ಬಿನ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ವ್ಯಾಪಕವಾಗಿ ಹರಡಿದೆ. ಪರಿಣಾಮವಾಗಿ ಬೆಳೆದು ನಿಂತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಸುಟ್ಟುಹೋಗಿದೆ. ಇದನ್ನೂ ಓದಿ: ದೆಹಲಿ | ವಿಪಕ್ಷಗಳ ಪ್ರತಿಭಟನೆಯಲ್ಲಿ ಮೋದಿ ಪರ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ
ಘಟನೆಯಿಂದ ರೈತರು ಆತಂಕಕ್ಕೊಳಗಾಗಿದ್ದು, ಸುಟ್ಟುಹೋದ ಕಬ್ಬಿನ ಬೆಳೆಗೆ ಸೂಕ್ತ ಪರಿಹಾರ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

