ನವದೆಹಲಿ: 15 ದಿನಗಳ ಅವಧಿಗೆ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ (Tamil Nadu) ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕಕ್ಕೆ (Karnatka) ಆದೇಶಿಸಿದೆ.
ಇಂದು ಬೆಳಗ್ಗೆ ಸಭೆ ನಡೆಸಿಸಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಪ್ರತಿದಿನ 3 ಸಾವಿರ ಕ್ಯೂಸೆಕ್ ನಂತೆ ಒಟ್ಟು 15 ದಿನಗಳ ಕಾಲ 3.91 ಟಿಎಂಸಿ ನೀರನ್ನು ಹರಿಸುವಂತೆ ಶಿಫಾರಸು ಮಾಡಿತ್ತು. ಈ ಶಿಫಾರಸನ್ನು ಪಾಲಿಸುವಂತೆ CWMA ಕರ್ನಾಟಕಕ್ಕೆ ಸೂಚಿಸಿದೆ.
ರಾಜ್ಯದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಹಾಗೂ ಕೆಆರ್‌ಎಸ್, ಹೇಮಾವತಿ, ಹಾರಂಗಿ ಮತ್ತು ಕಬಿನಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿದಿರುವುದರಿಂದ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಮನವಿ ಮಾಡಿದ ಮನವಿಯನ್ನು ಪ್ರಾಧಿಕಾರ ಒಪ್ಪಿಗೆ ನೀಡಲಿಲ್ಲ.

