– ಮಹಿಳಾ ಪೊಲೀಸ್ ಸಿಬ್ಬಂದಿಗೆ ಮೊಣಕೈನಿಂದ ಗುದ್ದಿದ ಪ್ರಿಯಾಂಕಾ
– ಪೊಲೀಸರ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ ಆರೋಪ – ರಾಗಾ, ಪ್ರಿಯಾಂಕಾ ವಿರುದ್ಧ ಕೇಸ್
ನವದೆಹಲಿ: ದೆಹಲಿಯಲ್ಲಿ ಬುಧವಾರ ನಡೆದ ಇಂಡಿಯಾ ಮೈತ್ರಿಕೂಟದ ಸಿಇಸಿ ವಿರೋಧಿ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರನ್ನ ತಳ್ಳಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
In his Eagerness to make a reel, Rahul Gandhi attempts to push a female police personnel. https://t.co/wQRzDh2DpG
— Pradeep Bhandari(प्रदीप भंडारी)🇮🇳 (@pradip103) October 7, 2026
ಬಿಜೆಪಿ (BJP) ವಕ್ತಾರ ಪ್ರದೀಪ್ ಭಂಡಾರಿ ಅವರು, ಈ ಘಟನೆಯ ವಿಡಿಯೊ ತುಣುಕೊಂದನ್ನ ಸಾಮಾಜಿಕ ಜಾಲತಾಣದಲ್ಲಿ (Social Media) ಹಂಚಿಕೊಂಡಿದ್ದು, ರೀಲ್ಸ್ ಮಾಡುವ ಉತ್ಸಾಹದಲ್ಲಿ ರಾಹುಲ್ ಗಾಂಧಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನ ತಳ್ಳಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಮೊಣಕೈನಿಂದ ಗುದ್ದಿದ ಪ್ರಿಯಾಂಕಾ
ಇದೇ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರ ಮತ್ತೊಂದು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಅವರು ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರನ್ನ ಮೊಣಕೈಯಿಂದ ಗುದ್ದಿರುವುದು ಕಂಡುಬಂದಿದೆ ಎಂದು ಬಿಜೆಪಿ ಆರೋಪಿಸಿದೆ.
https://t.co/aCXgoHZA03 When politics crosses every line: Priyanka Gandhi appears to elbow a woman police officer. Shameful scenes from the Congress camp.
— Ankit Trivedi (@MASTERJI108) October 7, 2026
ಬಿಜೆಪಿ ಸೋಷಿಯಲ್ ಮೀಡಿಯಾ ಸಹ ಸಂಚಾಲಕ ಅರುಣ್ ಯಾದವ್ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ, ರಾಜಕೀಯ ಎಲ್ಲ ಮಿತಿಗಳನ್ನೂ ಮೀರಿದಾಗ: ಪ್ರಿಯಾಂಕಾ ಗಾಂಧಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ಮೊಣಕೈಯಿಂದ ಹೊಟ್ಟೆ ಭಾಗಕ್ಕೆ ಜೋರಾಗಿ ಗುದ್ದಿರುವುದು ಕಂಡುಬಂದಿದೆ. ಕಾಂಗ್ರೆಸ್ ಶಿಬಿರದಿಂದ ಕಂಡುಬಂದಿರುವ ಈ ದೃಶ್ಯಗಳು ನಾಚಿಕೆಗೇಡಿನವು ಎಂದು ಟೀಕಿಸಿದ್ದಾರೆ.
ರಾಹುಲ್, ಪ್ರಿಯಾಂಕಾ ಗಾಂಧಿ ವಿರುದ್ಧ ಎಫ್ಐಆರ್
ಇನ್ನು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಮತ್ತು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಇತರ ಹಲವು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಹೆಸರನ್ನೂ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಪ್ರತಿಭಟನೆ ವೇಳೆ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಗಳು ಹಾಗೂ ಘಟನೆಗಳಲ್ಲಿ ಭಾಗಿಯಾಗಿರುವವರ ಪಾತ್ರದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರತಿಭಟನೆ ವೇಳೆ ಹಲವು ಸಂಸದರು ಹಾಗೂ ಪ್ರತಿಪಕ್ಷದ ನಾಯಕರನ್ನು ಒಳಗೊಂಡಂತೆ ಒಟ್ಟು 91 ಮಂದಿಯನ್ನ ವಶಕ್ಕೆ ಪಡೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸಿಇಸಿ ರಾಜೀನಾಮೆಗೆ ಆಗ್ರಹ
ಬುಧವಾರ ರಾಹುಲ್ ಗಾಂಧಿ ಅವರು ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಮತ್ತೊಂದು ದಿನದ ಪ್ರತಿಭಟನೆಯನ್ನ ಮುನ್ನಡೆಸಿದರು. ಪ್ರತಿಪಕ್ಷದ ಸಂಸದರು ಡಿನ್ನರ್ ಮೀಟ್ನಿಂದ ಬಸ್ಗಳ ಮೆರವಣಿಗೆಯಲ್ಲಿ ಜಂತರ್ ಮಂತರ್ ಸಮೀಪಕ್ಕೆ ತೆರಳಿ ದಿಢೀರ್ ಪ್ರತಿಭಟನೆ ನಡೆಸಿದರು.

