ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ (Chikkanna) ಹಾಗೂ ನಟ ಯಶಸ್ ಸೂರ್ಯ ಅವರಿಗೆ 59ನೇ ಸಿಸಿಹೆಚ್ ಕೋರ್ಟ್ (CCH Court) ಸಮನ್ಸ್ ಜಾರಿ ಮಾಡಿದೆ.
ಪ್ರಕರಣದಲ್ಲಿ ಸಾಕ್ಷಿಗಳಾಗಿರುವ ಇಬ್ಬರು ನಟರು, ಕೊಲೆಗೂ ಮುನ್ನ ಆರೋಪಿ ದರ್ಶನ್ (Darshan) ಭಾಗಿಯಾಗಿದ್ದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಹಿನ್ನೆಲೆ ಸಾಕ್ಷ್ಯ ಹೇಳಲು ನ್ಯಾಯಾಲಯ ಸಮನ್ಸ್ ನೀಡಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್- ಸುಪ್ರೀಂನಲ್ಲೂ ದರ್ಶನ್‌ಗೆ ಬಿಗ್ ಶಾಕ್

ಪ್ರಕರಣದ ವಿಚಾರಣೆಯನ್ನ ನಡೆಸುತ್ತಿರುವ 59ನೇ ಸಿಸಿಹೆಚ್ ಕೋರ್ಟ್, ಅಕ್ಟೋಬರ್ 13ರಂದು ವಿಚಾರಣೆಗೆ ಹಾಜರಾಗುವಂತೆ ಇಬ್ಬರು ನಟರಿಗೆ ಸಮನ್ಸ್ ಜಾರಿಗೊಳಿಸಿದೆ. ನಟ ಚಿಕ್ಕಣ್ಣ ಅವರಿಗೆ CW-80 ಹಾಗೂ ನಟ ಯಶಸ್ ಸೂರ್ಯ ಅವರಿಗೆ CW-98 ಸಮನ್ಸ್ ಜಾರಿ ಮಾಡಲಾಗಿದೆ.
ಬೆಂಗಳೂರಿನ ಸ್ಟೋನಿ ಬ್ರೂಕ್‌ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ಇಬ್ಬರೂ ನಟರು ಕೊಲೆ ಆರೋಪಿ ದರ್ಶನ್ ಜೊತೆಗೆ . ಭಾಗಿಯಾಗಿದ್ದರುಈ ಕುರಿತಂತೆ ನ್ಯಾಯಾಲಯದಲ್ಲಿ ಸಾಕ್ಷ್ಯ ನೀಡುವಂತೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಇದನ್ನೂ ಓದಿ: ದಿನಕ್ಕೆ 60 ಸಿಗರೇಟ್ ಸೇದುತ್ತಿದ್ದ ನಾನಾ ಪಾಟೇಕರ್ – 56ನೇ ವಯಸ್ಸಿನಲ್ಲಿ ಏಕಾಏಕಿ ಧೂಮಪಾನ ಬಿಟ್ಟಿದ್ದೇಕೆ?

