ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ (Gyanesh Kumar) ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ (Congress) ನೇತೃತ್ವದ ಇಂಡಿ ಬ್ಲಾಕ್ ನಾಯಕರು ನಡೆಸಿದ ಪ್ರತಿಭಟನೆಯಿಂದಾಗಿ ಭಾರಿ ಸಂಚಾರ ದಟ್ಟಣೆ ಉಂಟಾಗಿದ್ದು, ಪರಿಣಾಮ 5000ಕ್ಕೂ ಅಧಿಕ ಪ್ರಯಾಣಿಕರೂ ಟ್ರೈನ್ ಮಿಸ್ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ರೈಲ್ವೇ ಮೂಲಗಳು ಮಾಹಿತಿ ನೀಡಿದ್ದು, ಸಿಇಸಿ ರಾಜೀನಾಮೆಗೆ ಒತ್ತಾಯಿಸಿ ನಡೆಸಿದ ಪ್ರತಿಭಟನೆಯಿಂದಾಗಿ ನವದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ 5,000ಕ್ಕೂ ಹೆಚ್ಚು ಪ್ರಯಾಣಿಕರು ಸರಿಯಾದ ಸಮಯಕ್ಕೆ ರೈಲು ನಿಲ್ದಾಣಕ್ಕೆ ತಲುಪಲು ಸಾಧ್ಯವಾಗದೆ ರೈಲುಗಳನ್ನು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಸಿಇಸಿ ವಿರುದ್ಧ ಪ್ರತಿಭಟನೆ – ವಿಪಕ್ಷ ನಾಯಕರು ಬರ್ತಿದ್ದಂತೆ ರಾಜ್ಘಾಟ್ನಿಂದ ತೆರಳಿದ ರಾಹುಲ್, ಪ್ರಿಯಾಂಕಾ
ದಿಬ್ರುಗಢ ರಾಜಧಾನಿ, ಮುಂಬೈ ರಾಜಧಾನಿ, ವಂದೇ ಭಾರತ್ ಮತ್ತು ಕೆಲವು ಸ್ಥಳೀಯ ರೈಲುಗಳಲ್ಲಿ ಸೀಟ್ ಕಾಯ್ದಿರಿಸಿದವರು ಸೇರಿದಂತೆ ಹಲವರು ರೈಲು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
3 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತ:
ಗುರುವಾರ (ಅ.8) ಮಧ್ಯಾಹ್ನ 12 ಗಂಟೆಯ ನಂತರ ನವದೆಹಲಿಯ ಸುತ್ತಮುತ್ತಲಿನ ಹಲವಾರು ಪ್ರಮುಖ ಮಾರ್ಗಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ನವದೆಹಲಿ ರೈಲು ನಿಲ್ದಾಣಕ್ಕೆ ಹೋಗುವ ಪ್ರಮುಖ ಮಾರ್ಗಗಳಲ್ಲಿ ಒಂದಾದ ಮಿಂಟೋ ರಸ್ತೆಯಲ್ಲಿ ವಿರೋಧ ಪಕ್ಷದ ಸಂಸದರ ವಾಹನಗಳ ಗುಂಪು ಹೋದ ನಂತರ ಅಲ್ಲಿ ಸಂಚಾರಕ್ಕೆ ತೊಂದರೆ ಉಂಟಾಯಿತು. ಇದರಿಂದಾಗಿ ರೈಲು ನಿಲ್ದಾಣಕ್ಕೆ ಹೋಗುತ್ತಿದ್ದ ಪ್ರಯಾಣಿಕರಿಗೆ ಸಮಸ್ಯೆಯಾಯಿತು. ಈ ರಸ್ತೆಯು ಸುಮಾರು ಮೂರು ಗಂಟೆಗಳ ಕಾಲ ಬಂದ್ ಆಗಿತ್ತು.ಇದನ್ನೂ ಓದಿ: ಪ್ರತಿಭಟನೆಯ ನಡುವೆಯೇ CEC ಜ್ಞಾನೇಶ್ ಕುಮಾರ್ಗಿದ್ದ Z+ ಭದ್ರತೆ ಮತ್ತಷ್ಟು ಹೆಚ್ಚಳ
ಇಂಡಿಯಾ ಬ್ಲಾಕ್ ನಾಯಕರು, ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪ್ರಮುಖರು ಮುಖ್ಯ ಚುನಾವಣಾ ಆಯುಕ್ತ ಗ್ಯಾನ್ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಗುರುವಾರ (ಅ.8) ರಾಜ್ಘಾಟ್ಗೆ ತಲುಪಿ, ಪ್ರತಿಭಟನೆ ನಡೆಸಿದರು. ಚುನಾವಣಾ ಆಯೋಗವು ಸರ್ಕಾರದ ಕೈಗೊಂಬೆಯಾಗಿದೆ ಎಂದು ಆರೋಪಿಸಿವೆ.ಇದನ್ನೂ ಓದಿ: ದೆಹಲಿ | ವಿಪಕ್ಷಗಳ ಪ್ರತಿಭಟನೆಯಲ್ಲಿ ಮೋದಿ ಪರ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

