ಮೈಸೂರು: ರಾಜ್ಯಾದ್ಯಂತ ಮೈಸೂರು ದಸರಾ (Mysuru Dasara) ಹಿನ್ನೆಲೆ 3000 ಕೆಎಸ್‌ಆರ್‌ಟಿಸಿ ಬಸ್‌ಗಳ (KSRTC Bus) ವ್ಯವಸ್ಥೆ ಮಾಡಲಾಗಿದ್ದು, ಇದರೊಂದಿಗೆ ವಿಶೇಷ ಪ್ಯಾಕೇಜ್‌ಗಳ ಸೌಲಭ್ಯ ಮಾಡಲಾಗಿದೆ.
ಅ.16ರಿಂದ ಅ.27ರವರೆಗೆ ರಾಜ್ಯಾದ್ಯಂತ ಹೆಚ್ಚುವರಿ 3,000 ಕೆಎಸ್‌ಆರ್‌ಟಿಸಿ ಬಸ್‌ಗಳು ಕಾರ್ಯನಿರ್ವಹಿಸಲಿವೆ. ಜೊತೆಗೆ ಬೆಂಗಳೂರಿನಿಂದ (Bengaluru) ಮೈಸೂರಿಗೆ 700 ದಸರಾ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಅಂಬಾರಿ ತೂಕ ತಡೆಯಲಾಗದೇ ತಾಲೀಮು ಅರ್ಧಕ್ಕೆ ಮೊಟಕು – ಬಹುತೇಕ ಕ್ಯಾಪ್ಟನ್ ರೇಸ್‌ನಿಂದ ಮಹೇಂದ್ರ ಔಟ್
ಇನ್ನೂ ಮೈಸೂರಿನಿಂದ ಒಂದು ದಿನದ ಕೆಎಸ್‌ಆರ್‌ಟಿಸಿ ಪ್ಯಾಕೇಜ್ ವ್ಯವಸ್ಥೆ ಮಾಡಲಾಗಿದೆ. ಗಿರಿದರ್ಶಿನಿ, ಜಲದರ್ಶಿನಿ ಹಾಗೂ ದೇವದರ್ಶಿನಿ ಎಂಬ ಮೂರು ಪ್ಯಾಕೇಜ್‌ಗಳ ವ್ಯವಸ್ಥೆ ಮಾಡಲಾಗಿದೆ. ಗಿರಿದರ್ಶಿನಿ ಪ್ಯಾಕೇಜ್‌ನಲ್ಲಿ ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ನಂಜನಗೂಡು, ಚಾಮುಂಡಿ ಬೆಟ್ಟ ಹಾಗೂ ಬಿಳಿಗಿರಿ ರಂಗಸ್ವಾಮಿ ಬೆಟ್ಟ ವೀಕ್ಷಣೆಗೆ ಅವಕಾಶ ಇರಲಿದೆ.
ಜಲದರ್ಶಿನಿ ಪ್ಯಾಕೇಜ್‌ನಲ್ಲಿ ಗೋಲ್ಡನ್ ಟೆಂಪಲ್, ದುಬಾರೆ, ನಿಸರ್ಗಧಾಮ, ಅಬ್ಬೆ ಜಲಪಾತ, ಹಾರಂಗಿ ಜಲಪಾತ, ರಾಜಾಶೀಟ್ ಹಾಗೂ ದೇವದರ್ಶಿನಿ ಪ್ಯಾಕೇಜ್‌ನಲ್ಲಿ ನಂಜನಗೂಡು, ತಲಕಾಡು, ಮೂರು ಕುದುರೆ, ಕೆಆರ್‌ಎಸ್, ಸೋಮನಾಥಪುರ, ಶ್ರೀರಂಗಪಟ್ಟಣ ವೀಕ್ಷಣೆಗೆ ಅವಕಾಶ ಇರಲಿದೆ. ಇದನ್ನೂ ಓದಿ: ಸಿಇಸಿ ಪ್ರತಿಭಟನೆಯಿಂದ ಭಾರೀ ಟ್ರಾಫಿಕ್ ಜಾಮ್ – 5000ಕ್ಕೂ ಅಧಿಕ ಪ್ರಯಾಣಿಕರಿಗೆ ಟ್ರೈನ್ ಮಿಸ್

