– ದೇಶದ ಪ್ರತಿಯೊಬ್ಬ ಪ್ರಜೆಗೂ ಕೋರ್ಟ್ ಮೊರೆ ಹೋಗುವ ಹಕ್ಕಿದೆ
– ರಾಹುಲ್ ಭೇಟಿ ನಿರಾಕರಿಸಲು ಸ್ಪಷ್ಟನೆ ನೀಡಿದ ಸೂರ್ಯಕಾಂತ್
ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ಬಾಗಿಲು ಎಲ್ಲರಿಗೂ ತೆರೆದಿದೆ. ಸಾಮಾನ್ಯ ನಾಗರಿಕರು ಸೇರಿದಂತೆ ಪ್ರತಿಯೊಬ್ಬ ಭಾರತೀಯನಿಗೂ ಕೋರ್ಟ್ ಮೊರೆ ಹೋಗುವ ಹಕ್ಕಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ (CJI Surya Kant) ಹೇಳಿದ್ದಾರೆ.
ಇಂದು (ಅ.12) ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) 33ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ನ್ಯಾ. ಸೂರ್ಯಕಾಂತ್ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.
ಸುಪ್ರೀಂ ಕೋರ್ಟ್ ಬಾಗಿಲು ಎಲ್ಲರಿಗೂ ತೆರೆದಿದೆ. ಸಾಮಾನ್ಯ ನಾಗರಿಕರು ಸೇರಿದಂತೆ ಪ್ರತಿಯೊಬ್ಬ ಭಾರತೀಯನಿಗೂ ನ್ಯಾಯಾಲಯದ ಮೊರೆ ಹೋಗುವ ಹಕ್ಕಿದೆ ಎಂದು ಹೇಳಿದ್ದಾರೆ.

ನಿನ್ನೆ ಸಭೆಗೆ ಅನುಮತಿ ಕೋರಿ ನನಗೆ ಪತ್ರ ಬಂದಿತ್ತು. ಆದರೆ ನಾನು ಭೇಟಿಯಾಗಲು ಸಾಧ್ಯವಾಗದ್ದಕ್ಕೆ ನಿನ್ನೆ ರಾತ್ರಿಯೇ ಉತ್ತರ ನೀಡಿದ್ದೇನೆ. ಸುಪ್ರೀಂ ಕೋರ್ಟ್‌ನ ಬಾಗಿಲು ಎಲ್ಲರಿಗೂ ತೆರೆದಿದೆ. ಯಾವುದೇ ಸಾಮಾನ್ಯ ನಾಗರಿಕ ಅಥವಾ ಚುನಾಯಿತ ಪ್ರತಿನಿಧಿ ಅರ್ಜಿ ಸಲ್ಲಿಸಿದರೇ ಅದನ್ನ ಕಾನೂನಿನ ಪ್ರಕಾರವೇ ವಿಚಾರಣೆ ನಡೆಸಲಾಗುತ್ತದೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ರಾಹುಲ್ ಗಾಂಧಿ (Rahul Gandhi) ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಸಂಜೆ 4 ರಿಂದ 5 ಗಂಟೆಯೊಳಗೆ ಭೇಟಿಗೆ ಸಮಯ ಕೋರಿದ್ದರು. ಆದರೆ ಅವರು ಪ್ರಸ್ತಾಪಿಸಿರುವ ಹಲವು ವಿಚಾರಗಳು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವುದರಿಂದ, ಅವುಗಳ ಬಗ್ಗೆ ಆಡಳಿತಾತ್ಮಕವಾಗಿ ಭೇಟಿ ನೀಡಿ ಚರ್ಚಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮನವಿ ನೀಡುವ ಬದಲು ಕೋರ್ಟ್ ಮೂಲಕವೇ ಅರ್ಜಿ ಸಲ್ಲಿಸಿ ಕಾನೂನುಬದ್ಧವಾಗಿ ಮುಂದುವರಿಯಬೇಕು ಎಂದು ಸೂಚಿಸಿರುವುದಾಗಿ ತಿಳಿಸಿದ್ದಾರೆ.
‘ವೋಟ್ ಚೋರಿ’ ವಿರುದ್ಧ ಹೋರಾಟ
ಇನ್ನೂ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಇಂಡಿ ಮೈತ್ರಿಕೂಟ ಸಿಇಸಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿದೆ. ಜೊತೆಗೆ ‘ವೋಟ್ ಚೋರಿ’ ನಿಲ್ಲಿಸುವಂತೆ ಆಗ್ರಹಿಸಿದೆ. ಈ ಬೇಡಿಕೆಗಳನ್ನ ಮುಂದಿಟ್ಟುಕೊಂಡು INDIA ಮೈತ್ರಿಕೂಟದ ನಾಯಕರು ಇಂದು ಸುಪ್ರೀಂ ಕೋರ್ಟ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾಗಿದ್ದಾರೆ.
ಇನ್ನೂ ದೆಹಲಿಯಲ್ಲಿ ಮತ್ತೊಂದು ಸಿಜೆಪಿ ಪ್ರತಿಭಟನೆ ಕೂಡ ನಡೆಯುತ್ತಿದ್ದು, ಹಲವು ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

