ಬೆಂಗಳೂರು: ಕೆಪಿಎಸ್ಸಿ (KPSC Scam) ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದಲ್ಲಿ 24 ಅಭ್ಯರ್ಥಿಗಳಿಗೆ ನ್ಯಾಯ ಸಿಗಬೇಕಿದೆ. ಕಷ್ಟ ಪಟ್ಟು ಓದಿರುವ ಅಭ್ಯರ್ಥಿಗಳ ಹೆಸರನ್ನು ಕೋರ್ಟ್ಗೆ ನೀಡಿರುವ ಇಡಿ (ED), ಈ ಅಭ್ಯರ್ಥಿಗಳಿಗೆ ಕೆಲಸ ಸಿಗಬೇಕು ಎಂದಿದೆ.
ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಭಾರಿ ಅಕ್ರಮದ ರಹಸ್ಯವನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಇದನ್ನೂ ಓದಿ: ಕೆ-ಸೆಟ್ ಸುಸೂತ್ರ, ಶೇ.91ರಷ್ಟು ಹಾಜರು: ಕೆಇಎ
ಕಷ್ಟಪಟ್ಟು ಓದಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದ 24 ಅರ್ಹ ಅಭ್ಯರ್ಥಿಗಳು ಅವಕಾಶ ವಂಚಿತರಾಗಿದ್ದು, ಹಣ ನೀಡಿದ 29 ಮಂದಿ ಅಕ್ರಮವಾಗಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ ಎಂದು ಇಡಿ ತನ್ನ ತನಿಖಾ ವರದಿಯಲ್ಲಿ ನ್ಯಾಯಾಲಯಕ್ಕೆ ತಿಳಿಸಿದೆ.
ಪ್ರಶ್ನೆಪತ್ರಿಕೆ ಸೋರಿಕೆ, ಉತ್ತರಗಳ ಅಕ್ರಮ ಸರಬರಾಜು ಸೇರಿದಂತೆ ಮೂರು ವಿಭಿನ್ನ ಮಾರ್ಗಗಳಲ್ಲಿ ಅಕ್ರಮ ಎಸಗಲಾಗಿತ್ತು. ಹಣ ಕೊಟ್ಟ ಅಭ್ಯರ್ಥಿಗಳಿಗೆ 400ಕ್ಕೂ ಹೆಚ್ಚು ಅಂಕಗಳನ್ನು ನೀಡಿ ಜಾಕ್ಪಾಟ್ ಹೊಡೆಯುವಂತೆ ಮಾಡಲಾಗಿತ್ತು. ಇಡಿ ಅಧಿಕಾರಿಗಳು ಸಂತ್ರಸ್ತ ಅಭ್ಯರ್ಥಿಗಳನ್ನು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದು, ಪ್ರಾಮಾಣಿಕವಾಗಿ ಓದಿದ 24 ಅಭ್ಯರ್ಥಿಗಳಿಗೆ ಕಠಿಣ ಅನ್ಯಾಯವಾಗಿದೆ ಎಂದು ಕೋರ್ಟ್ಗೆ ನೀಡಿದ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ – ಮತ್ತೆ ಒಂದು ತಿಂಗಳ ಗಡುವು ವಿಸ್ತರಣೆ
ಅಕ್ರಮ ಎಸಗಿದವರ ವಿರುದ್ಧ ಕ್ರಮ ಕೈಗೊಂಡು, ವಂಚಿತರಾದ 24 ಮಂದಿಗೆ ಕೂಡಲೇ ಸೂಕ್ತ ನ್ಯಾಯ ಸಿಗಬೇಕೆಂದು ಇಡಿ ವರದಿ ಪ್ರತಿಪಾದಿಸಿದೆ.

