ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC) ಬಸ್‌ನಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದವರಿಂದ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದು, ಒಟ್ಟು 8.4 ಲಕ್ಷ ಸಂಗ್ರಹವಾಗಿದೆ.
ಸೆಪ್ಟೆಂಬರ್ ಒಂದೇ ತಿಂಗಳಲ್ಲಿ 42,784 ವಾಹನಗಳ ತಪಾಸಣೆ ಮಾಡಲಾಗಿದ್ದು, ಇದರಲ್ಲಿ 4310 ಪ್ರಕರಣಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಒಟ್ಟು ಟಿಕೆಟ್ ಇಲ್ಲದೇ ಸಂಚರಿಸಿದ 4382 ಪ್ರಯಾಣಿಕರಿಂದ ಒಟ್ಟು 8,45,034 ರೂ. ದಂಡವನ್ನು ವಸೂಲಿ ಮಾಡಿದ್ದಾರೆ. ಇದನ್ನೂ ಓದಿ: ಅನ್ನಸೇವೆ ಆ್ಯಪ್ ನಾಳೆಯಿಂದ ರಾಜ್ಯಾದ್ಯಂತ ಲಭ್ಯ; ಅ.20ರೊಳಗೆ e-KYC ಕಡ್ಡಾಯ
ಈ ಮೂಲಕ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,12,019 ರೂ. ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದು, ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

