ನವದೆಹಲಿ: ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಸ್ಥಾನಕ್ಕೆ ಎಲ್.ಮುರುಗನ್ (L.Murugan) ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ರಾಜ್ಯಸಭಾ ಸದಸ್ಯತ್ವವನ್ನೂ ತೊರೆದಿದ್ದಾರೆ.
ತಮಿಳುನಾಡಿನಲ್ಲಿ ತಳಮಟ್ಟದಿಂದ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ಪೂರ್ಣಾವಧಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ, ರಾಜ್ಯ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಸ್ಥಾನಗಳಿಂದ ತಮ್ಮನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಅವರು ಮನವಿ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತೀಯ ಸೇನೆಗೆ 1.25 ಲಕ್ಷ ಮೆಟ್ರಿಕ್ ಟನ್ ಭಾರತ್ ರೈಸ್ ಮೀಸಲು
‘ಎಕ್ಸ್’ (X) ನಲ್ಲಿನ ಪೋಸ್ಟ್ ಒಂದರಲ್ಲಿ ಮುರುಗನ್ ಅವರು ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಗೌರವಾನ್ವಿತ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತ ಮಾತೆ ಮತ್ತು ತಮಿಳುನಾಡಿಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವವಾಗಿದೆ ಎಂದು ಆ ಪೋಸ್ಟ್‌ನಲ್ಲಿ ತಿಳಿಸಲಾಗಿದೆ.
It has been the greatest honour of my life to serve Bharat Mata and Tamil Nadu under the leadership of Hon’ble Prime Minister Shri @narendramodi Ji.
From the son of daily wage labourers to serving in the Union Council of Ministers under the leadership of Hon’ble PM Shri @narendramodi Ji has been the greatest privilege of my life.
Now, I wish to return to the grassroots, stand with our karyakartas and dedicate myself full-time to strengthening the BJP in Tamil Nadu ahead of the 2029 Lok Sabha elections.
Nation First. Party Next. Self Last. 🙏🇮🇳
@NitinNabin @blsanthosh
— Dr.L.Murugan (@DrLMurugan) October 13, 2026
ಈಗ ನಾನು ತಳಮಟ್ಟಕ್ಕೆ ಮರಳಿ ನಮ್ಮ ಕಾರ್ಯಕರ್ತರೊಂದಿಗೆ ನಿಂತು 2029ರ ಲೋಕಸಭಾ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಪಡಿಸಲು ಪೂರ್ಣಾವಧಿಯಾಗಿ ತೊಡಗಿಸಿಕೊಳ್ಳಲು ಬಯಸುತ್ತೇನೆ. ಮೊದಲು ರಾಷ್ಟ್ರ, ನಂತರ ಪಕ್ಷ, ಕೊನೆಯಲ್ಲಿ ಸ್ವಯಂ ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಅವರು ನನ್ನನ್ನು ತಳ್ಳಲಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
ಕೇಂದ್ರದಲ್ಲಿ ಸಂಪುಟ ಪುನಾರಚನೆಯ ಕುರಿತಾದ ಚರ್ಚೆಗಳ ನಡುವೆಯೇ ಮುರುಗನ್ ಅವರ ಈ ನಡೆ ಅಚ್ಚರಿ ಮೂಡಿಸಿದೆ. ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ ಹಲವು ರಾಜ್ಯಸಭಾ ಸಂಸದರು ಮತ್ತು ಸಚಿವರಿಗೆ ಮರುನಾಮನಿರ್ದೇಶನ ಸಿಗದಿದ್ದರಿಂದ ಈ ಊಹಾಪೋಹಗಳು ಹುಟ್ಟಿಕೊಂಡಿದ್ದವು.

