ಮೈಸೂರು: ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ ಎದುರಾಗಿದೆ. ಮೈಸೂರಿನ ಟಿ.ನರಸೀಪುರದಲ್ಲಿ ಗಣೇಶ ಕೂರಿಸುವ ವಿಚಾರವಾಗಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್ ವಜಾಗೊಳಿಸಿದೆ.
ಟಿ.ನರಸೀಪುರ ಕೇಸ್‌ನಲ್ಲಿ ಪ್ರತಾಪ್ ಸಿಂಹ ವಿರುದ್ಧ 2 ಕೇಸ್ ದಾಖಲಾಗಿತ್ತು. ಈಗಾಗಲೇ ಒಂದು ಕೇಸ್‌ನಲ್ಲಿ ಪ್ರತಾಪ್ ಸಿಂಹಗೆ ಜಾಮೀನು ಸಿಕ್ಕಿದೆ.
ಆದರೆ, ಪ್ರಚೋದನಾಕಾರಿ ಭಾಷಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ರದ್ದಾಗಿರುವುದರಿಂದ ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟ ಎದುರಾಗಿದೆ.

