ಮಂಡ್ಯ: ಪಾರಂಪರಿಕ ಶ್ರೀರಂಗಪಟ್ಟಣ ದಸರಾ (Srirangapatna Dasara) ಮಹೋತ್ಸವಕ್ಕೆ ಇಂದು ಚಾಲನೆ ದೊರೆಯಲಿದೆ. ನಟ ಹಾಗೂ ನಿರ್ದೇಶಕ ವಿ. ರವಿಚಂದ್ರನ್ (V Ravichandran) ಅವರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ ಮನೆ ಮಾಡಲಿದೆ.
ಮಧ್ಯಾಹ್ನ 3ರಿಂದ 3:45ರ ನಡುವಿನ ಶುಭ ಕುಂಭ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಶ್ರೀರಂಗಪಟ್ಟಣದ ಕಿರಂಗೂರು ಬಳಿಯ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಬನ್ನಿ ಪೂಜೆಯ ಮೂಲಕ ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಇದನ್ನೂ ಓದಿ: ಹೂವಿನ ಅಲಂಕಾರಕ್ಕೆ 90 ಲಕ್ಷ, ಡಾನ್ಸ್ ಮಾಡೋಕೆ 80 ಲಕ್ಷ – ಹಾಸನಾಂಬ ಜಾತ್ರೆಯ ಖರ್ಚು ಕೇಳಿ ಬೆಚ್ಚಿಬಿದ್ದ ರೇವಣ್ಣ!
ಅಂಬಾರಿ ಹೊತ್ತು ಸಾಗಲಿರುವ ಮಹೇಂದ್ರ ಆನೆ:
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುತ್ತದೆ. ಬಳಿಕ ಅಂಬಾರಿ ಹೊತ್ತ ಮಹೇಂದ್ರ ಆನೆ ಹೆಜ್ಜೆ ಹಾಕಲಿದ್ದು, ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗಲಿದೆ. ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ `ಸ್ಟಿಂಗ್’ ಸುಂಟರಗಾಳಿ – ಜೆಡಿಎಸ್ ಸೋಶಿಯಲ್ ಮೀಡಿಯಾ ಟಾರ್ಗೆಟ್?
ಕಿರಂಗೂರು ಬಳಿಯ ಬನ್ನಿಮಂಟಪದಿಂದ ಆರಂಭವಾಗುವ ಜಂಬೂಸವಾರಿ ಮೆರವಣಿಗೆ ಶ್ರೀರಂಗನಾಥಸ್ವಾಮಿ ದೇವಾಲಯದವರೆಗೆ ಸಾಗಲಿದೆ. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಲಿದ್ದು, ಸಾಂಪ್ರದಾಯಿಕ ಕಲಾಪ್ರಕಾರಗಳು ದಸರಾ ಉತ್ಸವದ ಮೆರುಗನ್ನು ಹೆಚ್ಚಿಸಲಿವೆ. ಇದನ್ನೂ ಓದಿ: ಗ್ರಾಮೀಣ ಸೊಗಡಿನಿಂದ ಜಾಗತಿಕ ಮಾರುಕಟ್ಟೆವರೆಗೆ – ಗರ್ಬಾ ಸಂಸ್ಕೃತಿ ಬೆಳೆದು ಬಂದ ಸುವರ್ಣ ಪಯಣ!
ವಿವಿಧ ಕಲಾತಂಡಗಳ ಪ್ರದರ್ಶನ:
ಜಂಬೂಸವಾರಿ ಮೆರವಣಿಗೆಯಲ್ಲಿ ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಸ್ತಬ್ಧಚಿತ್ರಗಳ ಮೆರವಣಿಗೆಯೂ ನಡೆಯಲಿದ್ದು, ದಸರಾ ಉತ್ಸವಕ್ಕೆ ಸಾಂಸ್ಕೃತಿಕ ವೈಭವ ತುಂಬಲಿದೆ. ಇದನ್ನೂ ಓದಿ: Navratri 2026 Day 5: ಈ ದಿನ ಸ್ಕಂದಮಾತೆ ಪೂಜೆ ನೆರವೇರಿಸಿದ್ರೆ ಏನು ಲಾಭ?
ಈ ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ದಸರಾ ಮಹೋತ್ಸವದ ಅಂಗವಾಗಿ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಶ್ರೀರಂಗನಾಥಸ್ವಾಮಿ ದೇವಾಲಯದ ಸಮೀಪ ನಿರ್ಮಿಸಿರುವ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇದನ್ನೂ ಓದಿ: ಬೆಂಗಳೂರಲ್ಲಿ ವ್ಯಕ್ತಿ ಮೇಲೆ ಫೈರಿಂಗ್; ರಿಯಲ್ ಎಸ್ಟೇಟ್ ಉದ್ಯಮಿ ಪೊಲೀಸ್ ವಶಕ್ಕೆ

