– ಮೈಸೂರು ಶೀಘ್ರಗತಿ ನ್ಯಾಯಾಲಯದಿಂದ ತೀರ್ಪು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ದಸರಾದಲ್ಲಿ ಬಲೂನ್ ಮಾರುವ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದು ಕೊಲೆ ಮಾಡಿದ್ದ ಕೇಸ್ನಲ್ಲಿ ಕಾಮುಕನ ಅಪರಾಧ ಸಾಬೀತಾಗಿದೆ.
ಮೈಸೂರು ಶೀಘ್ರಗತಿ ನ್ಯಾಯಾಲಯದ (Mysuru Fast Track Special Court) ನ್ಯಾಯಾಧೀಶರಾದ ಅನಿಲ್ ಪಿ ವಘಾಢೆರವರು ಕಾರ್ತಿಕ್ನನ್ನು (32) ಅಪರಾಧಿ ಎಂದು ಘೋಷಿಸಿದ್ದು, ನಾಳೆ (ಅ.16) ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.ಇದನ್ನೂ ಓದಿ:ಮೈಸೂರು ದಸರೆಗೆ ಬಲೂನ್ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್ & ಮರ್ಡರ್ ಶಂಕೆ
ಕಳೆದ ವರ್ಷ ದಸರಾ ಸಮಯದಲ್ಲಿ ಈ ಘಟನೆ ನಡೆದಿತ್ತು. ದಸರಾ ಹಿನ್ನೆಲೆಯಲ್ಲಿ ಕುಟುಂಬವೊಂದು ಗುಲ್ಬರ್ಗಾದಿಂದ (Kalaburagi) ಬಲೂನ್ ಮಾರಲು ಮೈಸೂರಿಗೆ (Mysuru) ಬಂದಿತ್ತು. ಆ ಕುಟುಂಬ ದಸರಾ ವಸ್ತುಪ್ರದರ್ಶನ ಬಳಿ ಟೆಂಟ್ನಲ್ಲಿ ಮಲಗಿದ್ದಾಗ 9 ವರ್ಷದ ಬಾಲಕಿಯನ್ನ ಕಾರ್ತಿಕ್ ಎಳೆದೊಯ್ದು ಅತ್ಯಾಚಾರ ಮಾಡಿ, ಭೀಕರವಾಗಿ ಕೊಲೆ ಮಾಡಿದ್ದ.
ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಘಟನೆ ನಡೆದ 24 ಗಂಟೆಯಲ್ಲಿ ಆರೋಪಿಯನ್ನ ಅರೆಸ್ಟ್ ಮಾಡಲಾಗಿತ್ತು.ಇದನ್ನೂ ಓದಿ: ಭಾವಿ ಪತಿಯನ್ನೇ ಹತ್ಯೆಗೈದ ರಿಂಗ್ ರೋಡ್ ಶುಭಾಗೆ ಬಿಡುಗಡೆ ಇಲ್ಲ – ಕ್ಷಮಾದಾನ ಅರ್ಜಿ ರಿಜೆಕ್ಟ್

