ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ನಲ್ಲಿ ಇಂದು ನಸುಕಿನ ಜಾವ ನಡೆದ ಭೀಕರ ಅಪಘಾತಕ್ಕೆ (Road Accident) ನಾಲ್ವರು ಬಲಿಯಾಗಿದ್ದಾರೆ.
ಸ್ಲೀಪರ್ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ | ಒತ್ತಾಯಪೂರ್ವಕವಾಗಿ ಯುವಕನ ಗುಪ್ತಾಂಗದ ಶಸ್ತ್ರಚಿಕಿತ್ಸೆ – ಇಬ್ಬರು ಮಂಗಳಮುಖಿಯರ ಬಂಧನ

ಅಪಘಾತಕ್ಕೀಡಾದ ಬಸ್ ಮೈಸೂರಿನಿಂದ ಮಡಿಕೇರಿ ಕಡೆಗೆ ಹೊರಟಿತ್ತು, ಲಾರಿ ಮಡಿಕೇರಿ ಭಾಗದಿಂದ ಮೈಸೂರು ಕಡೆಗೆ ಬರುತ್ತಿತ್ತು. ಕೀರನಹಳ್ಳಿ ಗೇಟ್ ಬಳಿ ಅಪಘಾತಕ್ಕೀಡಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನ ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಇಂಧನ ಇಲಾಖೆ ಕಟ್ಟಡದ ಮೇಲಿಂದ ಬಿದ್ದು ನೌಕರ ಆತ್ಮಹತ್ಯೆ

