ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ (Soumya Reddy) ರಾಜೀನಾಮೆ ಸಲ್ಲಿಸಿದ್ದಾರೆ.
ಎರಡು ವರ್ಷಗಳ ಅವಧಿಗೆ ಈ ಜವಾಬ್ದಾರಿ ವಹಿಸಿಕೊಂಡಿದ್ದಾಗಿ ತಿಳಿಸಿರುವ ಅವರು, ರಾಜ್ಯಾದ್ಯಂತ ಮಹಿಳೆಯರನ್ನು ಸಂಘಟಿಸಿ, ಅವರ ಸಬಲೀಕರಣಕ್ಕಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ಸಂತೋಷ ತಂದಿದೆ ಎಂದಿದ್ದಾರೆ.
ಕಾಂಗ್ರೆಸ್ನ ಐದು ಗ್ಯಾರಂಟಿಗಳು ಮಹಿಳೆಯರಲ್ಲಿ ಬದಲಾವಣೆ ತಂದಿರುವುದನ್ನು ಖುದ್ದಾಗಿ ಕಂಡಿದ್ದೇನೆ ಎಂದು ಹೇಳಿರುವ ಅವರು, ಕರ್ನಾಟಕ ಸರ್ಕಾರದಲ್ಲಿ ಮಹಿಳಾ ಸಚಿವರಿಲ್ಲದ ವಿಚಾರವನ್ನು ನಾಯಕತ್ವದ ಗಮನಕ್ಕೆ ತರುವಂತೆ ಮನವಿ ಮಾಡಿದ್ದಾರೆ.
ಮುಂದಿನ ಅಧ್ಯಕ್ಷರ ಆಯ್ಕೆ ನಡೆಯುವವರೆಗೆ ಹುದ್ದೆಯಲ್ಲಿ ಮುಂದುವರಿಯುವುದಾಗಿ ತಿಳಿಸಿರುವ ಸೌಮ್ಯಾ ರೆಡ್ಡಿ, ಕಾಂಗ್ರೆಸ್ ಕಾರ್ಯಕರ್ತೆಯಾಗಿ ಮುಂದುವರಿದು 2028ರ ರಾಜ್ಯ ಚುನಾವಣೆ ಮತ್ತು 2029ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಟಾಸ್ಕ್ ಎರಡನೇ ಬಾರಿ ರದ್ದು – ಬಿಗ್ಬಾಸ್ ಸ್ಪರ್ಧಿಗಳ ಆಟಕ್ಕೆ ಕಿಚ್ಚ ಸುದೀಪ್ ಗರಂ
