ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಕೆಆರ್ಎಸ್ ಜಲಾಶಯದಲ್ಲಿ (KRS Dam) ಒಳ ಹರಿವು ಹೆಚ್ಚಳವಾಗಿದೆ.
ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜಸಾಗರ ಜಲಾಶಯದಲ್ಲಿ ಒಳಹರಿವಿನ ಪ್ರಮಾಣ 4,918 ಕ್ಯೂಸೆಕ್ಗೆ ಏರಿಕೆಯಾಗಿದ್ದು, ಗರಿಷ್ಠ ಮಟ್ಟ 124.80 ಅಡಿಯಿರುವ ಜಲಾಶಯದಲ್ಲಿ ಸದ್ಯ ನೀರಿನ ಮಟ್ಟ 101.26 ಅಡಿಗೆ ತಲುಪಿದೆ. ಇದನ್ನೂ ಓದಿ: ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ – ಓರ್ವ ಅಪ್ರಾಪ್ತ ಸೇರಿ ಮೂವರು ಅರೆಸ್ಟ್
ಇನ್ನೂ ಒಟ್ಟು 49.452 ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 23.814 ಟಿಎಂಸಿ ನೀರು ಸಂಗ್ರಹವಾಗಿದೆ. ಸಂಪೂರ್ಣವಾಗಿ ಕುಸಿದಿದ್ದ ಒಳಹರಿವಿನ ಪ್ರಮಾಣ ಇದೀಗ ದಿಢೀರ್ ಏರಿಕೆಯಾಗಿದ್ದು, ರೈತರಲ್ಲಿ ಮೊಗದಲ್ಲಿ ಸಂತಸ ಮೂಡಿಸಿದೆ.
