ಚಾಮರಾಜನಗರ: ದಸರಾ ಹಬ್ಬ ಹಾಗೂ ಆಯುಧ ಪೂಜೆಯ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಚಾಮರಾಜನಗರ (Chamarajanagara) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕಬ್ಬಳ್ಳಿ ಮಹೇಶ್ ಉದ್ಧಟತನ ಮೆರೆದಿದ್ದಾರೆ.
ಆಯುಧ ಪೂಜೆ ನಿಮಿತ್ತ ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ, ಅವರು ಏಕಾಏಕಿ ಗಾಳಿಯಲ್ಲಿ ಗುಂಡು ಹಾರಿಸಿರುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಆರ್ಎಸ್ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ತಮ್ಮ ತಂದೆಯಿಂದ ತಿಳಿದುಕೊಳ್ಳಲಿ: ಛಲವಾದಿ ತಿರುಗೇಟು
ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಈ ರೀತಿಯಲ್ಲಿ ಕಾನೂನು ಬಾಹಿರವಾಗಿ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಪಾಯ ತರುವಂತೆ ವರ್ತಿಸಿರುವುದಕ್ಕೆ ಸಾರ್ವಜನಿಕರು ಮತ್ತು ವಿವಿಧ ಸಂಘಟನೆಗಳು ತೀವ್ರ ಖಂಡನೆ ವ್ಯಕ್ತಪಡಿಸಿವೆ.
ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರ ಸುರಕ್ಷತೆಗೆ ಸವಾಲಾಗಿರುವ ಇಂತಹ ಅಟ್ಟಹಾಸದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ. ಇದನ್ನೂ ಓದಿ: ಪೊಲೀಸರು ಅವ್ರ ಡ್ಯೂಟಿ ಮಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಡಿಸಿಎಂ ರಿಯಾಕ್ಷನ್
