ಬೆಂಗಳೂರು: ಇಂದಿನಿಂದ ಮುಂದಿನ ಮೂರು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ,ಮಂಡ್ಯ, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಭಾರತ ವಿರೋಧಿ ಟೂಲ್ಕಿಟ್ ಗ್ಯಾಂಗ್ನ ಬೆಂಬಲ ಯಾಚಿಸುತ್ತಿದ್ದಾರೆ: ಬಿಜೆಪಿ ಮುಖಂಡ ಗೌರವ್ ಭಾಟಿಯಾ
ಇಂದು ಮಧ್ಯಾಹ್ನದ ಬಳಿಕ ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ, ಬಸವೇಶ್ವರ ನಗರ, ಕುರಬರಹಳ್ಳಿ, ಓಕಲೀಪುರಂ, ವಿಧಾನಸೌಧ, ಕಾರ್ಪೊರೇಷನ್, ಶಿವಾಜಿನಗರ, ವಸಂತನಗರ, ಶೇಷಾದ್ರಿಪುರ, ಮೆಜೆಸ್ಟಿಕ್, ಹಲಸೂರು, ಎಂಜಿ ರಸ್ತೆ, ರಿಚ್ಮಂಡ್ ಟೌನ್, ಮಾರ್ಕೆಟ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಇದನ್ನೂ ಓದಿ: ಸ್ಪೈಸ್ಜೆಟ್ ಹಾರಾಟದಲ್ಲಿ ಭಾರೀ ವಿಳಂಬ: ಬೆಂಗಳೂರಿನಲ್ಲಿ ಪ್ರಯಾಣಿಕರ ಪರದಾಟ, ಆಕ್ರೋಶ
